ಚುನಾವಣಾ ಅಕ್ರಮ ತಡೆಯಲು ಸಾರ್ವಜನಿಕರು ‘ಸಿ-ವಿಜಿಲ್’ ಆ್ಯಪನ್ನು ಸದ್ಬಳಕೆ ಮಾಡಿಕೊಳ್ಳಲಿ

ಧಾರವಾಡ: ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ-ವಿಜಿಲ್ ಆ್ಯಪ್ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಇದನ್ನು ಸದ್ಬಳಕೆ ಮಾಡಿಕೊಂಡು ಪಾರದರ್ಶಕ ಚುನಾವಣೆ ನಡೆಸುವಲ್ಲಿ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಚುನಾವಣಾ ಸಂದರ್ಭದಲ್ಲಿ ವಿವಿಧ ಪಕ್ಷಗಳು ಮತಗಳನ್ನು ಸೆಳೆಯಲು ಮತದಾರರಿಗೆ ಹಣ ಹಾಗೂ ಇತರೆ ಆಸೆ, ಆಮಿಷ ತೋರಿಸುವರು. ಇಂತಹ ಚುನಾವಣಾ ಅಕ್ರಮಗಳ ತಡೆಗೆ ಸಿವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದ್ದು, ಸಿವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ ಸಾರ್ವಜನಿಕರು  ಅಕ್ರಮ ಕುರಿತು ತಮ್ಮ ಮೊಬೈಲ್‍ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿ ಇಡುವ ಭರವಸೆಯನ್ನು ಕೂಡ ಆಯೋಗ ನೀಡಿದೆ.

ಚುನಾವಣಾ ಸಮಯದಲ್ಲಿ ಮತದಾರರು ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯಲ್ಲಿ ಆಮಿಷ ನೀಡಬಹುದಾದ ಹಣ ವಿತರಣೆ, ಉಡುಗೊರೆಗಳು, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್ ಮತ್ತು ಬ್ಯಾನರ್‍ಗಳು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು, ಸಂದೇಶಗಳು, ಮತಗಟ್ಟೆಯ 200 ಮೀ.ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನದ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ, ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರೇ ನೇರವಾಗಿ ಸಿವಿಜಿಲ್ ಆ್ಯಪ್‍ನಲ್ಲಿ ದೂರು ದಾಖಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ಮಾರ್ಟ್ ಫೋನ್ ನ ಗೂಗಲ್ ಪ್ಲೇ ನಲ್ಲಿ ಸಿ-ವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಅತ್ಯಂತ ಸುಲಭವಾಗಿ ಇದನ್ನು ಬಳಸಬಹುದಾಗಿದೆ. ಅಕ್ರಮದ ಕುರಿತಾದ ಫೋಟೋ ಅಥವಾ ವಿಡಿಯೋ ಗಳನ್ನು ಅಪ್‍ಲೋಡ್ ಮಾಡಿ ದೂರು ನೀಡಬಹುದು. ಆ್ಯಪ್ ತಮ್ಮ ಸ್ವವಿವರ ನೀಡಿಯಾದರೂ, ಅಥವಾ ನೀಡದೆಯೂ ದೂರು ನೀಡಬಹುದು. ಆ್ಯಪ್‍ನಲ್ಲಿ ತಿಳಿಸಿದ 16 ರೀತಿಯ ದೂರುಗಳ ಪೈಕಿ ಒಂದನ್ನು ಸೆಲೆಕ್ಟ್ ಮಾಡಿ ಸೆಂಡ್ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸಿವಿಜಿಲ್ಲನಲ್ಲಿ ದಾಖಲಾಗುವ ದೂರುಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸಿವಿಜಿಲ್ ಆ್ಯಪ್ ನಿರ್ವಹಣಾ ಸಿಬ್ಬಂದಿಗಳು, ಮತದಾನ ಮುಕ್ತಾಯವಾಗುವವರೆಗೂ ಪಾಳಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವರು. ದೂರು ಬಂದ ಕೂಡಲೇ ಅವುಗಳನ್ನು ಪರಿಶೀಲಿಸಿ, ಸದರಿ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಾಪ್ತಿಯ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ಹಾಗೂ ಮಾಹಿತಿಯನ್ನು ರವಾನಿಸಲಾಗುತ್ತದೆ. ಈ ಮಾಹಿತಿ ಆಧಾರದಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡುವ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ದೂರು ಕುರಿತಂತೆ ಅಗತ್ಯ ಕ್ರಮ ಕೈಗೊಂಡು ಗರಿಷ್ಟ 100 ನಿಮಿಷದ ಒಳಗೆ ದೂರನ್ನು ಇತ್ಯರ್ಥಪಡಿಸುವರು.

ಸಾರ್ವಜನಿಕರು ಸಿವಿಜಿಲ್ ಮಾತ್ರವಲ್ಲದೇ ಉಚಿತ ಸಹಾಯವಾಣಿ 1950 ಕ್ಕೆ ಸಹ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Gayathri SG

Recent Posts

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

14 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

35 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

56 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

1 hour ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

1 hour ago