ಹುಬ್ಬಳ್ಳಿಯಲ್ಲಿ ಸಂಭ್ರಮದ ರಂಜಾನ್: ಭಾವೈಕ್ಯತೆಗೆ ಸಾಕ್ಷಿಯಾದ ಆಚರಣೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮುಸ್ಲಿಂ ಧರ್ಮದ ಪವಿತ್ರ ರಂಜಾನ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾ ಮೈದಾನ ಸೇರಿದಂತೆ ಲ್ಯಾಮಿಂಗ್ಟನ್ ರೋಡ್, ಚೆನ್ನಮ್ಮ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್ ಆವರಣದಲ್ಲಿ ಲಕ್ಷಾಂತರ ಮುಸ್ಲಿಂ ಬಾಂಧವರು ರಂಜಾನ್ ಕೊನೆಯ ದಿನದ ಪ್ರಾರ್ಥನೆ ಸಲ್ಲಿಸಿದರು.

ಮುಸ್ಲಿಮರ ಪವಿತ್ರ ಮಾಸ ರಂಜಾನ್ ಶುಕ್ರವಾರ ಮುಗಿದಿದ್ದು, ಶನಿವಾರ ಶವ್ವಲ್ ಮೊದಲನೇ ದಿನದಂದು ಈದ್-ಉಲ್- ಫಿತರ್ (ರಂಜಾನ್) ಹಬ್ಬ ಆಚರಿಸಿದ್ದಾರೆ. ರಂಜಾನ್ ಹಬ್ಬದ ಸಂಪ್ರದಾಯದಂತೆ ಒಂದು ತಿಂಗಳ ಕಾಲ ಮುಸ್ಲಿಮರು ಉಪವಾಸ ವೃತ ಆಚರಿಸಿದ್ದಾರೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅನ್ನ, ನೀರು ಬಿಟ್ಟು ಉಪವಾಸ ವೃತ ಆಚರಿಸುತ್ತಾರೆ. ಉಪವಾಸ (ರೋಜಾ) ಮಾತ್ರವಲ್ಲದೇ ದಾನ (ಝಕಾತ್) ನಮಾಜ್, ಕುರಾನ್ ಪಠನ, ತರಾವೀಹ್ ಮಾಡುವ ಮೂಲಕ ದೇವರನ್ನು (ಅಲ್ಲಾಹ್ ನನ್ನು) ಸ್ಮೃತಿಸಲಾಗುತ್ತದೆ.

ಇನ್ನೂ ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಇದು ಒಂಬತ್ತನೇ ತಿಂಗಳು. ಲೂನಾರ್ ಕ್ಯಾಲೆಂಡರ್ ಅನ್ನು ಇಸ್ಲಾಂ ಧರ್ಮದವರು ಅನುಸರಿಸುತ್ತಾರೆ. ಕಾರಣ, ಅದರಲ್ಲಿ ರಂಜಾನ್ ದಿನಾಂಕ ಬದಲಾಗುತ್ತಿರುತ್ತದೆ. ಈ ಆಚರಣೆಯ ನಂಬಿಕೆಯಂತೆ, ಅಲ್ಲಾನೊಂದಿಗಿನ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು, ಉಪವಾಸ ಎಂಬುದು ಆತ್ಮಸ್ಥೈರ್ಯ ಹೆಚ್ಚಿಸಲು, ಹಸಿವಿನ ಮಹತ್ವ ಮತ್ತು ಅದೃಷ್ಟ ಸಂಪಾದನೆ ಮಾಡಲು ಶ್ರದ್ಧೆಯಿಂದ ಉಪವಾಸವನ್ನು ಆಚರಿಸುತ್ತಾರೆ. ತಿಂಗಳ ಪ್ರತಿಯೊಂದು ದಿನ ಮುಸ್ಲಿಮರು, ಈ ಹಬ್ಬದ ಆಚರಣೆ ಮೂಲಕ ಅಲ್ಲಾನಲ್ಲಿ ನಂಬಿಕೆ ಇಟ್ಟುಕೊಳ್ಳುತ್ತಾರೆ. ಪ್ರಾರ್ಥನೆ, ಕುರಾನ್ ಪಠಣ ಮತ್ತು ದಾನ-ಧರ್ಮದಲ್ಲಿ ತೊಡಗುವುದು ಮಾತ್ರವಲ್ಲದೇ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ತಮ್ಮ ಒಡನಾಟವನ್ನು ಇನ್ನಷ್ಟು ಗಟ್ಟಿಯಾಗಿಸುತ್ತಾರೆ.

ಸೂರ್ಯೋದಯದಕ್ಕಿಂತ ಮುಂಚೆ ಕುಟುಂಬ ಸದಸ್ಯರೊಂದಿಗೆ ಸೇವಿಸುವ ಆಹಾರ ವೇಳೆ ( ಸಹಿರಿ) ಹಾಗೂ ಸೂರ್ಯಾಸ್ತದ ವೇಳೆ ಉಪವಾಸ ಮುರಿಯುವ ವೇಳೆ (ಇಫ್ತಾರ್) ಉಪವಾಸದ ಪ್ರಮುಖ ಸಮಯ ಈಫ್ತಿಯಾರ್ ವೇಳೆಯಲ್ಲಿ ಎಲ್ಲರೂ ಒಂದೇ ಕಡೆ ಸೇರಿ ಮಸೀದಿಗಳಲ್ಲಿ, ಕೆಲವರು ಮನೆಗಳಲ್ಲಿ ಸೇರಿ ಖರ್ಜೂರ, ಬಾಳೆ ಹಣ್ಣು, ಕಲ್ಲಂಗಡಿ ಸೇರಿದಂತೆ ಎಲ್ಲಾ ಬಗೆಯ ಹಣ್ಣು- ಹಂಪಲು ತಂದು ಒಂದೆಡೆ ಸೇರಿಸಿ ಸಾಮೂಹಿಕವಾಗಿ ಸೇವಿಸುವ ಮೂಲಕ ಉಪವಾಸ ವೃತ ಮುಗಿಸುತ್ತಾರೆ. ಆ ಮೂಲಕ ಬಡವ, ಶ್ರೀಮಂತ ಉನ್ನತ, ಕನಿಷ್ಟ ಎಂಬ ಬೇಧಬಾವ ಮರೆತು ಮಾನವಿಯತೆ ಮೆರೆಯುವ ಮೂಲಕ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುತ್ತಾರೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

2 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago