ಹುಬ್ಬಳ್ಳಿ: ಬೊಮ್ಮಾಯಿ ಬಜೆಟ್‌ ಸುಳ್ಳಿನ ಕಂತೆ ಎಂದ ರಣದೀಪ್ ಸಿಂಗ್ ಸುರ್ಜೇವಾಲ

ಹುಬ್ಬಳ್ಳಿ: ಸಿಎಂ ಬಸವರಾಜ್ ಬೊಮ್ಮಯಿ ತಮ್ಮ ಎರಡನೇ ಬಜೆಟ್ ಮಂಡನೆಯಲ್ಲಿ ಮಹದಾಯಿ ಯೋಜನೆಗೆ 1000 ಕೋಟಿ ರೂ. ಅನುದಾನ ಮೀಸಲಿಡಿಸುವುದಾಗಿ ಘೋಷಿಸಿದ್ದಾರೆ. ಆದರೆ ಒಂದು ತಿಂಗಳಲ್ಲಿ ಈ ಅನುದಾನ ಹೇಗೆ ಬಿಡುಗಡೆ ಮಾಡುತ್ತೀರಿ? ಬೊಮ್ಮಾಯಿ  ಸುಳ್ಳು ಹೇಳಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಬಜೆಟ್ ಮಂಡಿಸಲಿದೆ. ಮಹದಾಯಿ ಯೋಜನೆಯನ್ನ ನಾವೇ ಪೂರ್ಣಗೊಳಿಸುತ್ತೇವೆ ಎಂದರು

ನಮ್ಮ ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳನ್ನ ಕಾಪಿ ಮಾಡಲಾಗಿದೆ. ನಮ್ಮನ್ನು ಕಾಪಿ ಮಾಡಲು ಯತ್ನಿಸಿ ಅಲ್ಲಿಯೂ ವಿಫಲವಾಗಿದ್ದಾರೆ. ಕಾಪಿ ಮಾಡಲೂ ಜಾಣ್ಮ ಬೇಕು ಎಂ ಸುರ್ಜೇವಾಲ ಅವರು ವ್ಯಂಗ್ಯವಾಡಿದರು. ಇನ್ನು ಟಿಪ್ಪು ಮುಗಿಸಿದಂತೆ ಸಿದ್ದರಾಮಯ್ಯರನ್ನ ಮುಗಿಸಬೇಕೆಂಬ ಹೇಳಿಕೆ ವಿಚಾರವಾಗಿ ಸುರ್ಜೆವಾಲ ಮಾತನಾಡಿ,

ಬಿಜೆಪಿಯರದ್ದು ಏನಿದ್ದರೂ ಗೋಡ್ರೆ ಸಂಸ್ಕೃತಿ. ಗಾಂಧಿ ಕೊಂದ ಸಂಸ್ಕೃತಿ . ಅದೇ ಸಂಸ್ಕೃತಿ ಇಂದಿರಾಗಾಂಧಿ, ರಾಜೀವ್ ಗಾಂಧಿಯನ್ನೂ ಕೊಂದಿತ್ತು. ಪಂಜಾಬಿನ ಸರ್ದಾರ್ ಬೇನ್ ಸಿಂಗ್ ಅವರನ್ನೂ ಕೊಂದಿತು. ನೂರಾರು ಕಾರ್ಯಕರ್ತರು ಭಾರತ ಉಳಿವಿಗೆ ಜೀವ ತ್ಯಾಗ ಮಾಡಿದ್ದಾರೆ. ನಾವು ಮತ್ತೆ ಮತ್ತೆ ಜೀವ ತ್ಯಾಗಕ್ಕೆ ಸಿದ್ಧ. ನಾವು ವಿಧ್ವಂಸಕ ಕೃತ್ಯಕ್ಕೆ ಪ್ರೋತ್ಸಾಹ ನೀಡುವುದಿಲ್ಲ.

ಪ್ರೀತಿಯ ಸಂದೇಶ ಸಾರುವವರು ನಾವು. ಅಶ್ವತ್ಥನಾರಾಯಣರನ್ನ ಕೂಡಲೇ ಬಂಧಿಸಬೇಕು. ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಆದರೆ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಸುರ್ಜೇವಾಲ, ಚುನಾವಣೆಯಲ್ಲಿ ಸೋಲುತ್ತೇವೆ ಅಂತ ಈ ರೀತಿ ಹೇಳಿಸುತ್ತಿದ್ದಾರೆ ಎಂದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago