ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯೊಬ್ಬಳ್ಳಿಗೆ ಜೀವ ಬೆದರಿಕೆ ಹಾಕಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿರುವ ರಿಂಗ್ ರೋಡ್ ಬಳಿ ನಡೆದಿದ್ದು, ನಾಲ್ವರು ವಿರುದ್ಧ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೌದು.. ಅಪ್ರಾಪ್ತ ಬಾಲಕಿಗೆ ಮೊಬೈಲ್ ಕೊಡಿಸುವುದಾಗಿ ಹುಬ್ಬಳ್ಳಿಗೆ ಕರೆಸಿ ಬೈಕ್ ನಲ್ಲಿ ರಿಂಗ್ ರೋಡ್ ಬಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದು, ಹುಬ್ಬಳ್ಳಿ ತಾಲೂಕಿನ ಶೇರೆವಾಡದ ದೇವರಾಜ, ಪಕ್ಕಿರೇಶ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸ್ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಸಂತ್ರಸ್ತ ಬಾಲಕಿಯೇ ಗೋಕುಲ ರೋಡ್ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.