ಮನೆಯಿಂದಲೇ ಮತ ಚಾಲಾಯಿಸಿದ ಹಿರಿಯ ನಾಗರಿಕರು, ವಿಕಲಚೇತನರು

ಧಾರವಾಡ: ಭಾರತ ಚುನಾವಣಾ ಆಯೋಗದ ಎಲ್ಲರೂ ಒಳಗೊಳ್ಳುವಿಕೆ ಆಶಯದಂತೆ ಮತ್ತಿ ಮತದಾನ ಹಕ್ಕು ಪಡೆದಿರುವ ಅರ್ಹ ಯಾರು ಮತದಾನದಿಂದ ಹೊರಗುಳಿಯದಂತೆ ಜಾಗೃತಿವಹಿಸಲು ಪ್ರಜಾಪ್ರಭುತ್ವದಲ್ಲಿ ಮತದಾನದ ವಿನೂತನ ಕ್ರಮವಾದ ಮನೆಯಿಂದಲೇ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಜಿಲ್ಲೆಯಲ್ಲಿ ಆರಂಭವಾಗಿದ್ದು, ನೋಂದಾಯಿತ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಖುಷಿಯಿಂದ ತಮ್ಮ ಮನೆಯಿಂದಲೇ ತಮ್ಮ ಮತದಾನದ ಹಕ್ಕು ಚಲಾಯಿಸಿ, ಜಿಲ್ಲಾಡಳಿತಕ್ಕೆ, ಚುನಾವಣಾ ಆಯೋಗಕ್ಕೆ ಧನ್ಯತೆ ಅರ್ಪಿಸಿದರು.

ಮನೆಯಿಂದಲೇ ಮತದಾನ ಪ್ರಕ್ರಿಯೆ ಅತೀ ಮಹತ್ವದ್ದು ಮತ್ತು ದೈಹಿಕವಾಗಿ ಒಂದಲ್ಲ ಒಂದು ರೀತಿಯಲ್ಲಿ ಅಶಕ್ತರಾಗಿರುವವರಿಗೆ ಇದು ಅತ್ಯಂತ ಉಪಯುಕ್ತವಾಗಿದೆ. ಮನೆಯಿಂದಲೇ ಮತದಾನಕ್ಕೆ ನೋಂದಾಯಿಸಿಕೊಂಡಿರುವ ಧಾರವಾಡ ನಗರದ ಕಮಲಾಪುರ, ಮಾಳಾಪುರ, ಸಾಧನಕೇರಿ, ದೊಡ್ಡನಾಯಕನಕೋಪ್ಪ, ಸಾರಸ್ವತಪುರ ಪ್ರದೇಶಗಳಿಗೆ ಇಂದು ಬೆಳಿಗ್ಗೆಯಿಂದ ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತೆರಳಿ, ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಮನೆಗಳಿಗೆ ಖುದ್ದು ಭೇಟಿ ನೀಡಿ, ಮತದಾನ ಪ್ರಕ್ರಿಯೆ ಪರಿಶೀಲಿಸಿದರು. ಮತ್ತು ಮತ ಚಲಾಯಿಸಿದ ಮತದಾರರನ್ನು ಮಾತನಾಡಿಸಿದರು.

ನಂತರ ಅವರು ಮಧ್ಯಾಹ್ನ ಧಾರವಾಡ ಕಮಲಾಪುರ ಶಾಲೆ ನಂಬರ 4 ರಲ್ಲಿ ಸ್ಥಾಪಿಸಿರುವ ವಿವಿಧ ಮತಗಟ್ಟೆಗಳ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿ ಮನೆಯಿಂದಲೇ ಮತದಾನಕ್ಕೆ ನೋಂದಾಯಿಸಿಕೊಂಡಿರುವ 1853 ಮತದಾರರಿಂದ ಮತದಾನ ಪಡೆಯಲು ಸೆಕ್ಟರ್ ಆಫೀಸರ್ ನೇತೃತ್ವದಲ್ಲಿ 102 ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡದಲ್ಲಿ ಪಿ.ಆರ್.ಓ, ಪೊಲೀಸ್ ಸೇರಿ 5 ಜನ ಸಿಬ್ಬಂದಿಗಳಿದ್ದಾರೆ. ಇಂದು ಮತ್ತು ನಾಳೆ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನೋಂದಾಯಿತ 85 ವರ್ಷ ಮೇಲ್ಪಟ್ಟ ಹಾಗೂ ಶೇ.40 ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವ ವಿಕಲಚೇತನರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನದವರೆಗೆ ಜಿಲ್ಲೆಯಲ್ಲಿ ಸುಮಾರು 300 ಜನ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಭಾದಿತ ಯಾವದೇ ಮತದಾರ ಇಲ್ಲ. ಚುನಾವಣಾ ಆಯೋಗದಿಂದ ಅಧಿಸೂಚಿತಗೊಂಡ ಅಗತ್ಯ ಸೇವೆಯಡಿ ಬರುವ 16 ಇಲಾಖೆಗಳ ನೌಕರರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 1221 ನಮೂನೆ 12ಡಿಗಳನ್ನು ವಿತರಿಸಲಾಗಿದ್ದು, ಅಂಚೆ ಮೂಲಕ ಮತದಾನ ಮಾಡಲು 1191 ಮತದಾರರು 12 ಡಿ ಪಡೆದಿದ್ದು, 1167 ಜನರು ನಮೂನೆ 12ಡಿ ಗಳನ್ನು ಸಲ್ಲಿಸಿದ್ದು, 1167 12ಡಿ ಗಳನ್ನು ಅನುಮೋದಿಸಲಾಗಿದೆ ಎಂದು ಅವರು ತಿಳಿಸಿದರು.

ಧಾರವಾಡ ತಹಸಿಲ್ದಾರ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರ ಸ್ಥಾಪನೆ: ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿನ ಅಂಚೆ ಮತದಾನ ಮಾಡುವ ನೌಕರರಿಗೆ ಧಾರವಾಡ ತಹಸಿಲ್ದಾರ ಕಚೇರಿಯಲ್ಲಿ ಮೇ 1 ರಿಂದ ಮೇ 3 ರವರೆಗೆ ಮತದಾನ ಕೇಂದ್ರ ತೆರೆಯಲಾಗುತ್ತದೆ. ನಮೂನೆ 12ಡಿ ಪಡೆದು, ಅನುಮೋದಿತವಾಗಿರುವ ಅಂಚೆ ಮತದಾರರು ಧಾರವಾಡ ತಹಸಿಲ್ದಾರ ಕಚೇರಿಯಲ್ಲಿ ಸ್ಥಾಪಿತವಾಗುವ ಮತಗಟ್ಟೆಯು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ತೆರೆದಿರುತ್ತದೆ. ಈ ಸಮಯದಲ್ಲಿ ಬಂದು ತಮ್ಮ ಮತ ಚಲಾಯಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಬೇರೆ ಜಿಲ್ಲೆಯ ಮತದಾರ ಅನುಕೂಲಕ್ಕಾಗಿ ಹೊಸದಾಗಿ ಅಂಚೆ ಮತಪತ್ರ ವಿನಿಮಯ (ಎಕ್ಸಚೈಂಜ್) ಕೇಂದ್ರ ಸ್ಥಾಪನೆ: ನೌಕರ ಕರ್ತವ್ಯ ಸಲ್ಲಿಸುವ ಜಿಲ್ಲೆ ಮತ್ತು ಮತದಾರನಾಗಿರುವ ಜಿಲ್ಲೆ ಬೇರೆ ಬೇರೆ ಆಗಿದ್ದಲ್ಲಿ ಅವರು ಮತದಾಮ ಮಾಡಲು ಅನುಕೂಲವಾಗುವಂತೆ ಅಂಚೆ ಮತಪತ್ರಗಳನ್ನು ವಿತರಿಸಿ, ಸಂಗ್ರಹಿಸಿ, ಅವರು ಮತದಾರರಾಗಿರುವ ಜಿಲ್ಲೆಗಳಿಗೆ ಕಳುಹಿಸಲು ಮತ್ತು ಬೇರೆ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಧಾರವಾಡ ಜಿಲ್ಲೆಯ ನೌಕರರ ಅಂಚೆ ಮತಪತ್ರ ಪಡೆಯಲು ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗವು ಪ್ರಥಮ ಬಾರಿಗೆ ಎಕ್ಸಚೈಂಜ್ ಸೆಂಟರ್ ತೆರೆದಿದ್ದು, ಅದು ಧಾರವಾಡ ನಗರದ ಆರ್.ಎಲ್.ಎಸ್. ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಲಿದೆ.

ಇಡೀ ರಾಜ್ಯದಲ್ಲಿ ಇಂತ ಎರಡು ಎಕ್ಸಚೈಂಜ್ ಕೇಂದ್ರಗಳು ಮಾತ್ರ ಇದ್ದು, ರಾಜ್ಯ ಜಿಲ್ಲೆಗಳಲ್ಲಿ ಏ.26 ರಂದು ಜರುಗುವ ಎರಡನೇ ಹಂತದ ಚುನಾವಣೆಯ ಕರ್ತವ್ಯನಿರತ ಸಿಬ್ಬಂದಿಗಳಿಗೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿ ಮತ್ತು ಮೇ 7 ರಂದು ಮತದಾನ ಜರುಗುವ ಜಿಲ್ಲೆಗಳಲ್ಲಿ ಕರ್ತವ್ಯನಿರತ ಸಿಬ್ಬಂದಿಗಳಿಗೆ ಅನುಕೂಲವಾಗುವಂತೆ ಚುನಾವಣಾ ಆಯೋಗ ಧಾರವಾಡ ಜಿಲ್ಲೆಯಲ್ಲಿ ಏಕ್ಸಚೈಂಜ್ ಸೆಂಟರ್ ಸ್ಥಾಪಿಸಿದೆ. ಧಾರವಾಡ ಜಿಲ್ಲಾಡಳಿತದಿಂದ ಸಿಬ್ಬಂದಿ ನೇಮಿಸಿ, ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ರೂ.21,47,59,890 ಮಾಲ್ಯದ ವಸ್ತು, ನಗದು ಜಪ್ತಿ: 916 ಪ್ರಕರಣ ದಾಖಲು: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ ಜಿಲ್ಲೆಯಲ್ಲಿ ಮಾರ್ಚ 16 ರಿಂದ ಇವತ್ತಿನವರೆಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಡಿ ನಗದು ರೂ. 20,35,52,970 ಮತ್ತು ಚಿನ್ನ, ನಗದು, ಡ್ರಗ್ಸ್, ಮದ್ಯ, ಉಚಿತ ಕೊಡುಗೆಗಳು ಸೇರಿದಂತೆ ರೂ.1,12,06,920 ಗಳ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಒಟ್ಟಾರೆ ನಗದು ಸೇರಿ ರೂ. 21,47,59,890 ಗಳ ಮಾಲ್ಯದ ವಸ್ತುಗಳು ಜಪ್ತಿಯಾಗಿವೆ ಮತ್ತು ಕ್ಯಾಶ್ ರೀ ಅಡ್ರಸಲ್ ಕಮೀಟಿಯಿಂದ ಜಪ್ತಿಗೆ ಸರಿಯಾದ ದಾಖಲೆ ಸಲ್ಲಿಸಿದ ಪ್ರಕರಣಗಳಲ್ಲಿ ಅವುಗಳ ಮಾಲೀಕರಿಗೆ ಇವತ್ತಿನವರೆಗೆ ರೂ.19,16,500 ಗಳ ನಗದು ಮರಳಿ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗಾಗಿ ಎಫ್.ಎಸ್.ಟಿ ಮತ್ತು ಎಸ್.ಎಸ್.ಟಿ ತಂಡಗಳಿಂದ 12 ಪ್ರಕರಣಗಳಲ್ಲಿ, 76 ಪ್ರಕರಣಗಳಲ್ಲಿ ಪೆÇಲೀಸ್, 826 ಪ್ರಕರಣಗಳಲ್ಲಿ ಅಬಕಾರಿ ಇಲಾಖೆ ಎಫ್.ಐ.ಆರ್ ದಾಖಲಿಸಿದೆ. ಒಟ್ಟಾರೆ 916 ಪ್ರಕರಣಗಳು ಇವತ್ತಿನವರೆಗೆ ದಾಖಲಾಗಿವೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಅಂಚೆ ಮತಪತ್ರದ ಜಿಲ್ಲಾ ನೋಡಲ್ ಅಧಿಕಾರಿ ಮೋಹನ ಶಿವಣ್ಣವರ, ಧಾರವಾಡ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶಾಲಂ ಹುಸೇನ್, ತಹಸಿಲ್ದಾರ ಡಾ.ಡಿ.ಎಚ್.ಹೂಗಾರ, ಸಹಾಯಕ ನೋಡಲ್ ಅಧಿಕಾರಿ ನಿಂಗನಗೌಡ ಶಾನಬೋಗ, ಎಡಿಎಲ್‍ಆರ್ ರಾಜಶೇಖರ ಹಳ್ಳೂರ, ಕಂದಾಯ ನಿರೀಕ್ಷಕ ಗುರು ಸುಣಗಾರ, ಗ್ರಾಮ ಆಡಳಿತಾಧಿಕಾರಿಗಳಾದ ನೀಲಮ್ಮ ದಾಸನಕೋಪ್ಪ, ವಿಠ್ಠಲ ಕಿಲಿ, ಸೆಕ್ಟರ ಅಧಿಕಾರಿ ಶಂಬುಲಿಂಗ ಹುಲ್ಲೂರ, ಬಿಎಲ್‍ಓಗಳಾದ ಕವಿತಾ ತೋಟಗೇರ, ಶೋಭಾ ಮಠಪತಿ, ರಾಜಕೀಯ ಪಕ್ಷದ ಏಜಂಟ್ ಸುರೇಶ ಹುಬ್ಬಳ್ಳಿ ಸೇರಿದಂತೆ ಇತರರು ಇದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago