News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಎಸ್.ಎಫ್ ನಾಗಶೆಟ್ಟಿ ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

SF Nagashetty wins best teacher award
Photo Credit : News Kannada

ಕುಂದಗೋಳ: ಶ್ರೀ ಕುಬೇರಪ್ಪ ಮುದಕಪ್ಪ ನಾಗಶೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ಯರೇಬೂದಿಹಾಳ ಈ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ಎಫ್ ನಾಗಶೆಟ್ಟಿಯವಯವರಿಗೆ ಉತ್ತಮ ಶಿಕ್ಷಕಿ ಎಂದು ಪ್ರಶಸ್ತಿ ಒಲಿದು ಬಂದಿದೆ.

ತಾವು ಕಲಿಸುವ ಪ್ರತಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ತಮ್ಮ ಕರ್ತವ್ಯವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ತಾಯಿ ಪ್ರೀತಿಯನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಬಾಳು ಬಂಗಾರವಾಗುವುದೇ ನಮಗೆ ದೊರೆಯುವ  ಅತ್ಯುನ್ನತ ಪ್ರಶಸ್ತಿ ಎನ್ನುವ ಶಿಕ್ಷಕಿಯರನ್ನು ಗುರುತಿಸಿ ಶಿಕ್ಷಣ ಇಲಾಖೆ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಎಂದು ಪ್ರಶಸ್ತಿ ನೀಡಿದೆ.

ಕುಂದಗೋಳದ ಸವಾಯಿ ಗಂಧರ್ವ ಹಾಲ್ ನಲ್ಲಿ ಸಪ್ಟೆಂಬರ್ 5 ರಂದು ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾನ್ಯ ತಾಲೂಕಿನ ಜನಪ್ರಿಯ ಶಾಸಕರಾದ ಎಂ.ಆರ್ ಪಾಟೀಲ’ರವರಿಂದ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಸಂಘ ಪದಾಧಿಕಾರಿಗಳು ಶಿಕ್ಷಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು