News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್, ಸಿಎಂ ಬೊಮ್ಮಾಯಿ ಟೀಕೆ

Shah has given suggestions, there is no doubt that the state will become a completely BJP-dominated state.
Photo Credit : News Kannada

ಹುಬ್ಬಳ್ಳಿ : ಬಿಜೆಪಿ ಅಲೆ ಕರ್ನಾಟಕದ ತುಂಬಾ ಇರುವುದು ಸಾಕ್ಷಿಯಾಗಿದೆ. ಜನರ ಉತ್ಸಾಹ ನೋಡಿದ್ರೆ ಬಿಜೆಪಿ ಅಲೆ ರಾಜ್ಯದ ತುಂಬಾ ಇರುವುದಕ್ಕೆ ಸಾಕ್ಷಿಯಾಗಿದೆ. ಮೋದಿ, ಅಮಿತ್ ಶಾ ಬಂದಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ. ಶಾ ಅವರು ಚುನಾವಣಾ ವಿಚಾರವಾಗಿ ಕೆಲ‌ವು ಸಲಹೆ ಸೂಚನೆಗಳನ್ನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯಿಂದ ಹಿಡಿದ ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದಾರೆ.ಕೆಲವು ಕಾರ್ಯಕ್ರಮ ಓವರ್‌ಲ್ಯಾಪ್ ಆಗುತ್ತಿದ್ದು ಇಂದು ರಾತ್ರಿ ಪರಿಶೀಲಿಸುತ್ತೇನೆ ಎಂದರು.

ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿದ್ದೇನೆ. ನನ್ನ ಮೇಲೆ ಒಂದು ಆರೋಪ ಮಾಡಿ, ಅದನ್ನು ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ.ಸಿದ್ಧರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅವರ ಮೇಲಿನ ಪ್ರಕರಣಗಳ ಕುರಿತು ಲೋಕಾಯುಕ್ತ ತನಿಖೆಗೆ ಸಹ ನಿಡಲಾಗಿದೆ. ನನ್ನ ಮೇಲೆ‌ ಮಾಡಿರುವ ಆರೋಪದ ಕುರಿತು ಸಿದ್ಧರಾಮಯ್ಯ ಸಾಬೀತು ಮಾಡಲಿ. ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್. ಭ್ರಷ್ಟಾಚಾರದ ಅವಿಭಾಜ್ಯ ಅಂಗ ಕಾಂಗ್ರೆಸ್, ಅವರು ಮಾತನಾಡೋದು ಹಾಸ್ಯಾಸ್ಪದವಾಗಿ ಕಾಣಿಸುತ್ತೆ. ಅವರ ಎಷ್ಟು ಜನ ನಾಯಕ್ರು ಜೈಲಿಗೆ ಹೋಗಿದ್ದಾರೆ, ಬೇಲಲ್ಲಿ ಬಂದಿದ್ದಾರೆ ಎಲ್ಲರಿಗೂ ಗೊತ್ತಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು