ಶೌರ್ಯ ಜಾಗರಣ ರಥ ಯಾತ್ರೆ ಧಾರವಾಡಕ್ಕೆ ಆಗಮನ

ಧಾರವಾಡ: ಇಲ್ಲಿಯ ಕೆಲಗೇರಿ ಗ್ರಾಮದಲ್ಲಿ ಧಾರವಾಡ ವಿಭಾಗಕ್ಕೆ “ಶೌರ್ಯ ಜಾಗರಣ ರಥ ಯಾತ್ರೆ” ಆಗಮಿಸಿದ್ದು. ಕೆಲಗೇರಿ ಗ್ರಾಮದ ಮಹಿಳೆಯರು ಪೂರ್ಣ ಕುಂಭದೊಂದಿಗೆ ಮತ್ತು ಗ್ರಾಮದ ರೈತರು ರಥವನ್ನು ಭವ್ಯವಾಗಿ ಸ್ವಾಗತಿಸಿದರು.

ಮುಖ್ಯ ವಕ್ತಾರರಾಗಿ ಆಗಮಿಸಿದ ಆರ್.ಎಸ್.ಎಸ್ ನ ಹಿರಿಯರಾದ ಶ್ರೀಧರ ನಾಡಿಗೇರ ಅವರು ಮಾತನಾಡಿ ಸನಾತನ ಧರ್ಮ ಅಮರ, ಭಾರತ ಜಗತ್ಗುರು ಆಗಬೇಕೆಂದ್ರೆ ಹಿಂದೂಗಳು ಜಾಗೃತವಾಗಬೇಕು, ಒಂದಾಗಬೇಕು ಎಂದು ಕರೆಕೊಟ್ಟರು.

ರಥದಲ್ಲಿ ಹನುಮನ ಮೂರ್ತಿ ಸ್ಥಾಪಿಸಲ್ಪಟ್ಟಿತು ರಥ ಯಾತ್ರೆಯು ದ್ವಿಚಕ್ರ ವಾಹನದ ಜಾಥಾದೂಂದಿಗೆ ನಗರದ ಪ್ರಮುಖ ಬಡಾವಣೆಗಳಲ್ಲಿ ಸಂಚರಿತು. ಈ ಸಂದರ್ಭದಲ್ಲಿ ಡಾ. ರಾಮನಗೌಡರ, ಶಿವಾನಂದ ಸತ್ತಿಗೇರಿ, ಶಶಿ ಹಿರೇಮಠ, ಈರೇಶ ಅಂಚಟಗೇರಿ, ವಿಜಯಾನಂದ ಶೆಟ್ಟಿ, ಬಸವರಾಜ ಗರಗ, ಪ್ರಮೋದ ಕಾರಕೂನ, ರುದ್ರಗೌಡರ್, ಚಂದ್ರಕಲಾ ಕೊಟಬಾಗಿ, ರೇಣುಕಾ ಇರಕಲ್, ಅಮಿತ್ ಪಾಟೀಲ ,ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

Gayathri SG

Recent Posts

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

51 seconds ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

8 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

12 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

23 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

27 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago