News Karnataka Kannada
Tuesday, April 30 2024
ಹುಬ್ಬಳ್ಳಿ-ಧಾರವಾಡ

ಶೆಟ್ಟರ್ ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ: ಸಂತೋಷ ಲಾಡ್

ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ಸೇರ್ಪಡೆ ಆಗಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
Photo Credit : News Kannada

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ಸೇರ್ಪಡೆ ಆಗಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಅವರಿಗೆ ನಮ್ಮ ಪಕ್ಷದಲ್ಲಿ ಉತ್ತಮ ಸ್ಥಾನಮಾನ ನೀಡಿದ್ದೆವು.ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದರೆ ಅವರೊಬ್ಬ ಅವಕಾಶವಾದಿಗಳು ಅನ್ನಿಸುತ್ತೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷದಲ್ಲಿ ಎಲ್ಲ ಸಮುದಾಯದವರೂ ಇದ್ದಾರೆ. ಬಿಜೆಪಿಗೂ ನಮ್ಮ ಪಕ್ಷಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಶೆಟ್ಟರ್ ಅವರ ಮೇಲೆ ನನಗೆ ಅಪಾರ ಗೌರವವಿದೆ. ಆದರೆ ಅವರು ಪಕ್ಷ ಬಿಟ್ಟು ಹೋದದ್ದು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ನಮ್ಮದು ಡಬಲ್ ಡೆಕ್ಕರ್ ಬಸ್ ಎಂದು ಶೆಟ್ಟರ್ ಹೋಗಿರುವುದು ಸಂತೋಷ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು