News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಪಾದಯಾತ್ರೆ ಮಾಡುವ ಮೂಲಕ ಮನೆ, ಮನೆ ಪ್ರಚಾರ ನಡೆಸಿದ ಶಿವಲೀಲಾ ಕುಲಕರ್ಣಿ

Shivleela Kulkarni campaigns door-to-door by taking out a padayatra
Photo Credit : News Kannada

ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಶಿವಲೀಲಾ ಕುಲಕರ್ಣಿ ಅವರು ಪಾದಯಾತ್ರೆ ಮಾಡುವ ಮೂಲಕ ಮನೆ, ಮನೆ ಪ್ರಚಾರ ನಡೆಸಿದರು.

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನುವಾಣಾ ಕಣಕ್ಕಿಳಿದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪರವಾಗಿ ಅವರ ಪತ್ನಿ ಶಿವಲೀಲಾ ಅವರೇ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಉಪ್ಪಿನ ಬೆಟಗೇರಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿದ ಶಿವಲೀಲಾ ಅವರು, ವಿನಯ್ ಕುಲಕರ್ಣಿ ಹಾಗೂ ಕಾಂಗ್ರೆಸ್ ಪಕ್ಷ ನೀಡಿರುವ ಭರವಸೆಗಳ ಕರಪತ್ರವನ್ನು ಮತದಾರರಿಗೆ ನೀಡಿ ಈ ಬಾರಿ ವಿನಯ್ ಕುಲಕರ್ಣಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಶಿವಲೀಲಾ ಕುಲಕರ್ಣಿ ಅವರಿಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಯಿತು. ತವನಪ್ಪ ಅಷ್ಟಗಿ ಕೂಡ ಶಿವಲೀಲಾ ಕುಲಕರ್ಣಿ ಅವರಿಗೆ ಸಾಥ್ ನೀಡಿದರು. ಈಶ್ವರ ಶಿವಳ್ಳಿ, ಬಾಬಾಮೊಯುದ್ದೀನ್ ಚೌಧರಿ ಸೇರಿದಂತೆ ಅನೇಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು