ಸಿದ್ದರಾಮಯ್ಯಗೆ ಸಿಎಂ ಪಟ್ಟ, ಧಾರವಾಡದಲ್ಲಿ ಹೋಳಿಗೆ ಊಟ

ಧಾರವಾಡ: ಈ ಹಿಂದೆ ಸಿದ್ದರಾಮಯ್ಯ ಸಿಎಂ ಇದ್ದ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ತೆರೆದು ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಆಹಾರ ವಿತರಿಸಲಾಗುತ್ತಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಈ ಯೋಜನೆಗೆ ಬ್ರೇಕ್ ನೀಡಲಾಗಿತ್ತು. ಇದೀಗ ಮತ್ತೆ ಸಿದ್ದರಾಮಯ್ಯನವರು ಸಿಎಂ ಆಗಿರುವುದರಿಂದ ಇಂದಿರಾ ಕ್ಯಾಂಟೀನ್ ಮತ್ತೆ ಕಾರ್ಯಾರಂಭ ಮಾಡಲು ಸಿದ್ಧವಾಗಿವೆ.

ಅದೇ ಖುಷಿಯಲ್ಲಿ ಧಾರವಾಡದ ಪಾಲಿಕೆ ಸದಸ್ಯ ಡಾ.ಮಯೂರ್ ಮೋರೆ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಹೋಳಿಗೆ ಊಟ ಬಡಿಸುವ ಮೂಲಕ ಖುಷಿ ಹಂಚಿಕೊಂಡಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿರುವುದರಿಂದ ಇಂದಿರಾ ಕ್ಯಾಂಟೀನ್‌ ಮತ್ತೆ ಕಾರ್ಯಾರಂಭ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಹೀಗಾಗಿ ಇದೇ ಖುಷಿಯಲ್ಲಿ ಹುಬ್ಬಳ್ಳಿ, ಧಾರವಾಡ, ದಕ್ಷಿಣ ಕನ್ನಡ, ಬಾಗಲಕೋಟೆ ಸೇರಿದಂತೆ ಒಟ್ಟು 17 ಇಂದಿರಾ ಕ್ಯಾಂಟೀನ್‌ಗಳಲ್ಲಿ  9 ಸಾವಿರ ಹೋಳಿಗೆಗಳನ್ನು ವಿತರಣೆ ಮಾಡಲಾಗಿದೆ. ಧಾರವಾಡದ ಮಿನಿ ವಿಧಾನಸೌಧದ ಎದುರಿಗೆ ಇರುವ ಇಂದಿರಾ ಕ್ಯಾಂಟೀನ್ನಲ್ಲಿ ಹೋಳಿಗೆ ಊಟ ಹಾಕಲಾಗಿದ್ದು, ಸಾರ್ವಜನಿಕರು ಖುಷಿಯಿಂದಲೇ ಹೋಳಿಗೆ ಊಟ ಸವಿದಿದ್ದಾರೆ.

Ashika S

Recent Posts

ಗಬ್ಬೆದ್ದು ನಾರುತ್ತಿರುವ ಚರಂಡಿ: ಅಂಬೇಡ್ಕರ್ ನಾಮಫಲಕದ ಬಳಿಯೇ ದುರ್ನಾತ

ಗಬ್ಬೆದ್ದು ನಾರುತ್ತಿರುವ ಚರಂಡಿಯ ಅವ್ಯವಸ್ಥೆಯಿಂದಾಗಿ ಗ್ರಾಮಸ್ಥರು ಮೂಗು, ಬಾಯಿ ಮುಚ್ಚಿಕೊಂಡೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ…

1 min ago

ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅವರ ಪೆನ್‍ಡ್ರೈವ್ ಪ್ರಕರಣ ಹಾಗೂ ರೇವಣ್ಣ ಬಂಧನದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,…

10 mins ago

ಮಳೆರಾಯನಿಗಾಗಿ ದೇವರ ಮೊರೆ ಹೋದ ತುಮಕೂರು ಜನತೆ

ಬಿಸಿಲ ತಾಪಕ್ಕೆ ಜನ ಜೀವನ ತತ್ತರಿಸಿ ಹೋಗಿದ್ದು, ಇದೀಗ ಮಳೆರಾಯನ ಕಣ್ಣಾಮುಚ್ಚಾಲೆ ಆಟ ನಿಲ್ಲಿಸಲೆಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ…

11 mins ago

ಕರ್ನಾಟಕದ ಮಾನ-ಮರ್ಯಾದೆ ರಸ್ತೆಗಳಲ್ಲಿ ಪೆನ್‌ಡ್ರೈವ್ ಮೂಲಕ ಹರಾಜಾಗುತ್ತಿದೆ

ಪ್ರಜ್ವಲ್ ವಿಚಾರದಲ್ಲಿ ಬಿಜೆಪಿ  ಡಬಲ್ ಸ್ಟ್ಯಾಂಡ್ ತೆಗೆದುಕೊಂಡಿದೆ. ಪ್ರಜ್ವಲ್ ದೇಶ ಬಿಟ್ಟು ಹೋಗಲು ಕೇಂದ್ರದ ಸಪೋರ್ಟ್ ಇದೆ ಎಂದು ಯುವ…

28 mins ago

ಪ್ರಜ್ವಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಹೈ ಟೆನ್ಷನ್!

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇವತ್ತು ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ…

31 mins ago

ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದ ಟಿಡಿಪಿ

ಚುನಾವಣೆಯಲ್ಲಿ ಗೆದ್ದರೆ ಮುಸ್ಲಿಮರಿಗೆ ನೀಡಲಾಗಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು…

35 mins ago