News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ಲೋಕಸಭಾ ಚುನಾವಣೆ ನಂತ್ರ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಬೇಕು – ಪ್ರಹ್ಲಾದ್ ಜೋಶಿ

ಲೋಕಸಭಾ ಚುನಾವಣೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಖಚಿತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
Photo Credit : NewsKarnataka

ಹುಬ್ಬಳ್ಳಿ: ಲೋಕಸಭಾ ಚುನಾವಣೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಖಚಿತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್‌ ನಲ್ಲಿ ಬಹುಮತ ಗೆಲುವು ಸಾಧಿಸಿದ್ದೇವೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ 28 ಸ್ಥಾನ ಗೆಲ್ಲುತ್ತದೆ. ಈ ಕಾರಂದಿಂದ ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಬೇಕಾಗುತ್ತದೆ. ಅಲ್ಲದೇ ಕಾಂಗ್ರೆಸ್‌ ಪಕ್ಷದಲ್ಲಿ ಇದೀಗ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಸಿದ್ದರಾಮಯ್ಯನಿಗೆ ಬೇರೆ ಯಾರಿಂದಲೂ ಸಮಸ್ಯೆಯಿಲ್ಲ, ಅವರ ಪಕ್ಷದವರಿಂದಲೇ ಸಮಸ್ಯೆ ಎಂದು ಹೇಳಿದ್ದಾರೆ.

ಇದೇ ವೇಳೆ ಈಶ್ವರಪ್ಪ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ನಿಧಾನವಾಗಿ ಈಶ್ವರಪ್ಪ ಸಮಾಧಾನ ಆಗುತ್ತಾರೆ. ಚುನಾವಣೆಗೆ ಬಹಳ ಸಮಯ ಇರುವ ಕಾರಣಕ್ಕೆ ಕೆಲವೆಡೆ ಗೊಂದಲ ಇದೆ. ಲೋಕಸಭೆ ಚುನಾವಣೆ ಬೇರೆ, ವಿಧಾನಸಭೆ ಚುನಾವಣೆ ಬೇರೆ. ಲೋಕಸಭೆಯಲ್ಲಿ ಮೋದಿ ನೋಡಿ ಮತ ಹಾಕ್ತಾರೆ ಎಂದು ಜೋಶಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಸಚಿವ ಪ್ರಹ್ಲಾದ್ ಜೋಶಿಯವರು ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಹುಬ್ಬಳ್ಳಿ ಅರವಿಂದ್ ನಗರದ ಬಿಜೆಪಿ ಕಚೇರಿಯಲ್ಲಿಂದು ಕುಂದಗೋಳ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಆರ್ ಪಾಟೀಲ್ ಮತ್ತು ಬಿಜೆಪಿ ಪ್ರಮುಖರ ಜೊತೆಗೆ ನಡೆಸಿದ್ದಾರೆ.

ಬಳಿಕ ಮಹಿಳಾ ಮೋರ್ಚಾ ಜೊತೆಗೆ ಸಂವಾದ ನಡೆಸಿದ ಜೋಶಿ, ವಿಕಸಿತ ಭಾರತದ ರಕ್ಷಣೆಗಾಗಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ಬೂತ್ ಮಟ್ಟದ ಕಾರ್ಯಕರ್ತರು ಜನರಿಗೆ ನಮ್ಮ ಸರ್ಕಾರದ ಸಾಧನೆಗಳನ್ನು ಜಾಗೃತಿ ಮೂಡಿಸಿ, ಬಿಜೆಪಿ ಬೆಂಬಲಿಸಬೇಕೆಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು