News Karnataka Kannada
Saturday, May 11 2024
ಹುಬ್ಬಳ್ಳಿ-ಧಾರವಾಡ

ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಸಿಬಿಐ ತನಿಖೆ ನಡೆಸಿ: ಶ್ರೀರಾಮ ಸೇನೆ ಆಗ್ರಹ

Sri Ram Sene demands CBI probe into Soujanya murder case
Photo Credit : News Kannada

ಧಾರವಾಡ: ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶ್ರೀ ರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

13 ವರ್ಷದ ಹಿಂದೆ ಮಂಗಳೂರು ಜಿಲ್ಲೆ ಬೆಳ್ತಂಗಡಿ, ತಾಲ್ಲೂಕಿನ ಧರ್ಮಸ್ಥಳದಲ್ಲಿ ಅತ್ಯಂತ ಅಮಾನವೀಯ ಘಟನೆ ಜರುಗಿತ್ತು. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದು 13 ವರ್ಷಗಳಾದರೂ ಇನ್ನೂ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕೊಲೆ ಪ್ರಕರಣ ದಿಕ್ಕು ತಪ್ಪಿಸಿದ, ತನಿಖೆಯಲ್ಲಿ ಲೋಪ ಎಸಗಿದ ಅಧಿಕಾರಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾದವರಿಗೆ ಶಿಕ್ಷೆ ನೀಡಿ ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ, ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ ಮಾಡಿದ ಶ್ರೀ ರಾಮ ಸೇನೆ ಕಾರ್ಯಕರ್ತರು ಸೂಕ್ತ ಸಿಬಿಐ ತನಿಖೆಗೆ ನಡೆಸುವಂತೆ ಒತ್ತಾಯಿಸಿದ್ದರು.

ಈ ಸಂದರ್ಭದಲ್ಲಿ ಶ್ರೀ ರಾಮ ಸೇನೆ ರಾಜ್ಯ ಕಾರ್ಯದರ್ಶಿ ರಾಜು ಖಾನಪ್ಪನವರ, ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ, ಕಾರ್ಯದರ್ಶಿ ಮಂಜು ಕಾಟಕರ್, ತಾಲೂಕು ಅಧ್ಯಕ್ಷ ಮೈಲಾರ ಗುಡ್ಡಪ್ಪನವರ, ನಗರ ಪ್ರಮುಖರಾದ ಹನುಮಂತ ಉಣಕಲ್, ವಿಶ್ವಾಸ ನಾಗಶೆಟ್ಟಿ, ಮಂಜು ಕವಲಗೇರಿ ಸೇರಿದಂತೆ ಹಲವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು