ಧಾರವಾಡ: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಇಂದಿನ ಹಿಂದಿ (ತೃತೀಯ ಭಾಷಾ) ಹಾಗೂ ಎನ್.ಎಸ್.ಕ್ಯೂ.ಎಫ್ ವಿಷಯಗಳ ಪರೀಕ್ಷೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ 28,071 ವಿದ್ಯಾರ್ಥಿಗಳು ಹಾಜರಾಗಿದ್ದರು.
ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 366 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ 7 ತಾಲೂಕುಗಳ 101 ಪರೀಕ್ಷಾ ಕೇಂದ್ರಗಳಲ್ಲಿ ನಿಯಮಾನುಸಾರ ಪರೀಕ್ಷೆ ನಡೆದಿವೆ. ಜಾಗೃತ ದಳದ ಅಧಿಕಾರಿಗಳು ನಕಲು ತಡೆಯಲು ಉತ್ತಮ ತಪಾಸಣೆ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.