ಮುಸ್ಲಿಂ ಸಮಯದ 4% ಮೀಸಲಾತಿ ಕಿತ್ತೊಗೆದ ರಾಜ್ಯ ಸರ್ಕಾರ : ಮುಸ್ತಫಾ ಕುನ್ನಿಭಾವಿ

ಹುಬ್ಬಳ್ಳಿ:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಏಕಾಏಕಿ ಮುಸ್ಲಿಂ ಸಮುದಾಯದ ಶೇ.4 ರ ಮೀಸಲಾತಿ ಕಿತ್ತುಕೊಂಡಿರುವುದು ಖಂಡನೀಯ ಎಂದು ಮುಸ್ಲಿಂ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಮುಸ್ತಫಾ ಕುನ್ನಿಭಾವಿ ಹೇಳಿದರು.

ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯಾವ ಆಧಾರದ ಮೇಲೆ ಮೀಸಲಾತಿ ಕಿತ್ತುಕೊಂಡಿದ್ದಾರೆ ಎಂಬುದನ್ನು ಸ್ಪಷ್ಟ ಪಡಿಸಬೇಕು ಎಂದು ಒತ್ತಾಯಿಸಿದರು.

ಮೈಸೂರು ಮಹಾರಾಜರು ನೇಮಿಸಿದ ಲೆಸ್ಲಿ ಮಿಲ್ಲರ್ ಆಯೋಗದ ವರದಿಯಿಂದ ಹಿಡಿದು ಡಾ. ನಾಗನಗೌಡ ಸಮಿತಿ, ಹಾವನೂರ ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗದ ವರದಿಗಳು ಮುಸ್ಲಿಂ ಸಮುದಾಯ ಆರ್ಥಿಕವಾಗಿ ಹಿಂದುಳಿದ ಸಮುದಾಯ ಎಂದು ವರದಿ ಕೊಟ್ಟಿವೆ. ಆದರೆ, ರಾಜ್ಯ ಸರ್ಕಾರ ನಮ್ಮ ಸಮುದಾಯದ ಮೀಸಲಾತಿ ಕಿತ್ತುಕೊಂಡಿರುವುದು ನಮಗೆ ನೋವು ಕೊಟ್ಟಿದೆ ಎಂದರು.

ಯಾವುದೋ ಒಂದು ಸಮುದಾಯದ ಮನವೊಲಿಕೆಗಾಗಿ ಮತ್ತೊಂದು ಸಮುದಾಯದ ಮೀಸಲಾತಿ ಕಿತ್ತುಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಮುಸ್ತಫಾ, ನಾವು ಮೀಸಲಾತಿ ಕೊಂಡಿರುವುದನ್ನು ಖಂಡಿಸಿ ಶಾಂತಯುತವಾಗಿ ಪ್ರತಿಭಟನೆ ನಡೆಸುತ್ತೇವೆ. ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಹರಿಹರ ಪೀಠದ ವಚನಾನಂದ ಸ್ವಾಮೀಜಿಗಳು ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ತಮ್ಮ ಸಮುದಾಯಕ್ಕೆ ನೀಡಿದ್ದು ಇದನ್ನು ತಾವು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.

ಮುಂದಿನ ವಾರ ಉಭಯಶ್ರೀಗಳನ್ನು ಭೇಟಿ ಮಾಡಿ ಕೇಳಿಕೊಳ್ಳುತ್ತೇವೆ. ಮುಸ್ಲಿಂ ಸಮುದಾಯದ ಮಕ್ಕಳನ್ನು ಕರೆದುಕೊಂಡು ಹೋಗಿ ಶ್ರೀಗಳ ಮಡಿಲಿಗೆ ಹೋಗುತ್ತೇವೆ. ಪತ್ರ ಚಳವಳಿ ಮಾಡುತ್ತೇವೆ. ರಂಜಾನ್ ಮುಗಿದ ಬಳಿಕ ರಾಜ್ಯದ ಕೂಡಲಸಂಗಮ ಹಾಗೂ ನಿರ್ಮಲಾನಂದ ಸ್ವಾಮೀಜಿಗಳ ಮಠದಿಂದ ಮೀಸಲಾತಿಗಾಗಿ ರಥಯಾತ್ರೆ ಹಮ್ಮಿಕೊಳ್ಳುಲಿದ್ದೇವೆ. ಮುಖ್ಯಮಂತ್ರಿ ಬೊಮ್ಮಾಯಿಯವರೇ ನೀವು ವಿಷ ಕೊಟ್ಟರು, ಅದನ್ನುಅಮೃತ ಎಂದು ಸೇವಿಸುವ ಮುಗ್ದ ಸಮಾಜ ನಮ್ಮದು. ನಮ್ಮ ಮೀಸಲಾತಿ ತೆಗೆಯುವಾಗ ಯಾವುದಾದರೂ ಅಧ್ಯಯನ ನಡೆಸಿದ್ರಾ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಹೇಳಿದರು.

Sneha Gowda

Recent Posts

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

8 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

10 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

20 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

24 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

35 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

1 hour ago