ಹುಬ್ಬಳ್ಳಿ: ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್ನಲ್ಲಿ ವಿದ್ಯಾರ್ಥಿನಿಯ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲಿ ನಡೆದಿದೆ.ಸ್ನೇಹಾ ಹಿರೇಮಠ್ ಮೃತ ದುರ್ದೈವಿ.
ಸ್ನೇಹಾ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸದಸ್ಯ ನಿರಂಜನ ಹಿರೇಮಠ ಪುತ್ರಿ. ಸ್ನೇಹಾ ಹಿರೇಮಠ ಕುತ್ತಿಗೆಗೆ ಚಾಕು ಇರಿದ ಯುವಕ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಸ್ನೇಹಾನನ್ನು ಕಿಮ್ಸ್ ಆಸ್ಪತ್ರೆಗೆ ಕರೆತರುವ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುತ್ತಿಗೆಗೆ ಚಾಕು ಇರಿತ ಮಾಡಿದ ಯುವಕನಿಗಾಗಿ ಪೊಲೀಸರು ಬಲೆ ಬೀಸಿದಿದ್ದಾರೆ.