ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಸೈಕಲ್ ನೀಡಿಲ್ಲ: ವಿದ್ಯಾರ್ಥಿಗಳಿಗೆ ನಿರಾಸೆ

ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಪ್ರೌಢ ಶಿಕ್ಷಣದ ಮಹತ್ವವನ್ನು ಪರಿಚಯಿಸುವ ಸದುದ್ದೇಶದಿಂದ ಉಚಿತ ಸೈಕಲ್ ವಿತರಣೆ ಮಾಡುತ್ತಿದ್ದ ಸರ್ಕಾರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಸೈಕಲ್ ವಿತರಣೆ ಮಾತ್ರ ಮಾಡಿಲ್ಲ. ಪ್ರಸ್ತುತ ಶೈಕ್ಷಣಿಕ ವರ್ಷದ ಆರಂಭದಲ್ಲಿ ಶಾಲಾ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಿಸುವ ಭರವಸೆ ನೀಡಿದ್ದ ಬೊಮ್ಮಾಯಿ ಸರ್ಕಾರ. ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಸಹ ಇನ್ನೂ ಸೈಕಲ್ ನೀಡಿಲ್ಲ. ಇದರಿಂದ ವಿದ್ಯಾರ್ಥಿಗಳು ಸೈಕಲಗಾಗಿ ಕಾಯುವಂತಾಗಿದೆ‌.

2006-07 ರ ಶೈಕ್ಷಣಿಕ ವರ್ಷದಲ್ಲಿ ಉಚಿತ ಬೈಸಿಕಲ್ ಯೋಜನೆ ರಾಜ್ಯ ಸರ್ಕಾರ ಆರಂಭಿಸಿತ್ತು. ಮಕ್ಕಳ ಶೈಕ್ಷಣಿಕ ಹಕ್ಕು ಎತ್ತಿ ಹಿಡಿಯುವದರ ಜೊತೆಗೆ ಸಾರಿಗೆ ಸೌಲಭ್ಯ ಒದಗಿಸುವ ಮಹತ್ತರ ಯೋಜನೆ ಇದ್ದಾಗಿತ್ತು. ಆದರೆ 2019 ರಲ್ಲಿ ಸಾಂಕ್ರಾಮಿಕ ರೋಗ ಕೋವಿಡ್‌ನಿಂದ ಸ್ಥಗಿತಗೊಂಡಿದ್ದ ಯೋಜನೆ ಮರಳಿ ಇನ್ನೂ ಪ್ರಾರಂಭವಾಗಿಲ್ಲ. ಉಚಿತ ಬೈಸಿಕಲ್ ಯೋಜನೆ ಸಾರ್ವಜನಿಕ ಶಿಕ್ಷಣ ಇಲಾಖೆ ಆರಂಭಿಸಿದಾಗ ಶಾಲಾ ದಾಖಲಾತಿ ಸಹ ಹೆಚ್ಚಳವಾಗಿತ್ತು. ಇದು ಪ್ರತಿಯೊಂದು ಮಗುವಿಗೂ ಶಿಕ್ಷಣ ನೀಡುವ ಸರ್ಕಾರದ ಆಶೆಯಕ್ಕೂ ಸಹ ಪೂರಕವಾಗಿತ್ತು. ಆದ್ರೆ ಇಂತಹ ಮಹತ್ತರ ಯೋಜನೆಯನ್ನ ಬೇಜವಾಬ್ದಾರಿಯಿಂದ ಬಸವರಾಜ್ ಬೊಮ್ಮಾಯಿ ಸರ್ಕಾರ ಮರೆತು ಬಿಟ್ಟಿದೆ.

ಇನ್ನೂ ರಾಜ್ಯದಲ್ಲಿ ಬಹುತೇಕ ಸಣ್ಣ ಗ್ರಾಮ, ಗುಡ್ಡಗಾಡು ಪ್ರದೇಶ, ಕಾಡಂಚಿನ ಪ್ರದೇಶಗಳಿಗೆ ಸರಿಯಾದ ಸಾರಿಗೆ ಸೌಲಭ್ಯ ಹಾಗೂ ವಾಹನ ಸಂಚಾರವೂ ಇಲ್ಲ. ಕೊರೋನ ಬಳಿಕ ಆದಾಯವಿಲ್ಲದ ಕಾರಣಕ್ಕೆ ಬಹುತೇಕ ಗ್ರಾಮಗಳಿಗೆ ಸಾರಿಗೆ ಸೌಲಭ್ಯವೇ ಸ್ಥಗಿತವಾಗಿದೆ. ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ನಗರ ಹಾಗೂ ಪಟ್ಟಣದಂತಹ ಪ್ರದೇಶಕ್ಕೆ ಹೋಗುವ ಅನಿವಾರ್ಯತೆ ಇದೆ. ಸರ್ಕಾರ ಉಚಿತ ಸೈಕಲ್ ಯೋಜನೆ ಆರಂಭಿಸಿದಾಗ ಮಕ್ಕಳ ಸಮಸ್ಯೆಗೆ ಪರಿಹಾರ ದೊರಕಿತ್ತು. ಉಚಿತ ಸೈಕಲ್ ಯೋಜನೆ ಇನ್ನೂ ಆರಂಭವಾಗದ ಕಾರಣ ಸಾರಿಗೆ ವಂಚಿತ ಗ್ರಾಮಗಳ ಮಕ್ಕಳಿಗೆ ಕಾಲ್ನಡಿಗೆಯೇ ಗತಿಯಾಗಿದೆ‌. ಶಿಕ್ಷಣ ಪಡೆಯಬೇಕೆಂಬ ಆಸಕ್ತ ವಿದ್ಯಾರ್ಥಿಗಳು ನಿತ್ಯ 5-10 ಕಿಮೀ ನಡೆದುಕೊಂಡು ಶಾಲೆಗೆ ತೆರಳುತ್ತಿದ್ದಾರೆ. ಆದರೆ ಬಹುತೇಕ ವಿದ್ಯಾರ್ಥಿಗಳು ಕಷ್ಟವೇ ಬೇಡವೆಂದು ಶಾಲೆಗಳತ್ತ ಮುಖ ಮಾಡುತ್ತಿಲ್ಲ.

ಒಟ್ಟಿನಲ್ಲಿ ಒಬ್ಬ ವಿದ್ಯಾರ್ಥಿಯ ಕಲಿಕಾ ಅವಧಿ ಮುಗಿದ ಬಳಿಕ ಅವರ ಕುಟುಂಬದ ಇನ್ನೂಳಿದ ವಿದ್ಯಾರ್ಥಿಗಳಿಗೆ ಅದು ಸದುಪಯೋಗವಾಗಿತ್ತು. ಆದ್ರೆ ಶಿಕ್ಷಣ ಇಲಾಖೆ ಮಾತ್ರ ಈ ಯೋಜನೆಯನ್ನೇ ನೆನಪು ಹಾರಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಿಂದಲೂ ಶಾಲಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿಗಳ ವೇದಿಕೆ, ಕರ್ನಾಟಕ ಸರ್ಕಾರ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಸರ್ಕಾರಕ್ಕೆ ಉಚಿತ ಬೈಸಿಕಲ್ ಯೋಜನೆ ಆರಂಭಿಸಲು ಮನವಿ ಸಲ್ಲಿಸಿವೆ. ಆದ್ರೆ ಸರ್ಕಾರ ಮಾತ್ರ ಇದಕ್ಕೆ ಸ್ಪಂದಿಸಿಲ್ಲ.

Sneha Gowda

Recent Posts

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

12 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

36 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

52 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

1 hour ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

2 hours ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

3 hours ago