ಹೆಂಡತಿ ಮೇಲೆ ಸಂಶಯ ಪಟ್ಟು ಕೊಡಲಿಯಿಂದ ಕೊಚ್ಚಿ ಕೊಂದ ಗಂಡ

ಧಾರವಾಡ: ಪತ್ನಿ ಮೇಲೆ ಸಂಶಯ ಪಟ್ಟು ಪತಿಯೊಬ್ಬ ಕೊಡಲಿಯಿಂದ ಕೊಂದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದ ಆರೋಪಿ,

ಶಿವಪ್ಪ ಶುಕ್ರವಾರ ರಾತ್ರಿ ಕುಡಿದು ಬಂದು ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ಇಂದು ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ಪತ್ನಿ ಮೇಲೆ ಸಂಶಯ ಪಡುತ್ತಿದ್ದನು.

ಹೆಂಡತಿಯ ಜೊತೆಗೆ ಶಿವಪ್ಪ ಶುಕ್ರವಾರ ರಾತ್ರಿಯಿಡೀ ಜಗಳ ಮಾಡಿ ಬೆಳಗ್ಗೆ ಸಿಟ್ಟಿನಲ್ಲಿ ಪತ್ನಿಯನ್ನು ಕೊಂದು ಮನೆಯಲ್ಲಿಯೇ ಇದ್ದನು. ಅಕ್ಕ-ಪಕ್ಕದ ಮನೆಯವರು ಬಂದು ನೋಡಿದಾಗ ರಕ್ತಸಿಕ್ತವಾಗಿ ಬಿದ್ದಿದ್ದ ಮಲ್ಲವ್ವಳನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಜಾಗದಲ್ಲೇ ಕುಳಿತಿದ್ದ ಶಿವಪ್ಪನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago