ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು : ಬಿಎಸ್‌ವೈ

 ಹುಬ್ಬಳ್ಳಿ: ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಪ್ರಹ್ಲಾದ್ ಜೋಶಿ ಅವರ ಪರವಾಗಿದ್ದಾರೆ. ಆದರೆ ಸ್ವಾಮೀಜಿಯೊಬ್ಬರು ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ನಗರದವವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಇದೆ. ಪ್ರಹ್ಲಾದ್ ಜೋಶಿ ಅವರು ಪ್ರಭುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.

ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮಿಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದರು.

Nisarga K

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

10 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

31 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

37 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

55 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

56 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

1 hour ago