ಹುಚ್ಚಪ್ಪಜ್ಜನ ಕೆರೆಯ ಅಂಗಳದಲ್ಲಿ ಮತದಾನ ಜಾಗೃತಿಗಾಗಿ ಸ್ವೀಪ್ ಕಾರ್ಯಕ್ರಮ

ಧಾರವಾಡ : ಮತದಾನ ಜಾಗೃತಿಗಾಗಿ ಮಾದನಬಾವಿ ಗ್ರಾಮದ ಹುಚ್ಚಪ್ಪಜ್ಜನ ಕೆರೆಯ ಅಂಗಳದಲ್ಲಿ ಸ್ವೀಪ್ ಕಾರ್ಯಕ್ರಮ ನಡೆಯಿತು.

ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಕೆಲಸಕ್ಕೆ ಆಗಮಿಸಿದ್ದ ಮಾದನಬಾವಿ ಗ್ರಾಮದ ಸುಮಾರು 200 ಜನ ಪುರುಷ ಮತ್ತು ಮಹಿಳಾ ಕೂಲಿ ಕಾರ್ಮಿಕರಿಗೆ ಮತದಾನದ ಮಹತ್ವ ತಿಳಿಸಲಾಯಿತು. ಜಿಲ್ಲಾ ಸ್ವೀಪ್ ನೂಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ ಅವರು ಮಾತನಾಡಿ, ಮೇ 7 ರಂದು ಎಲ್ಲರೂ ಮತಗಟ್ಟೆಗೆ ಬಂದು ತಪ್ಪದೇ ಮತದಾನ ಮಾಡಬೇಕೆಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ ಅವರು ಮಾತನಾಡಿ, ನರೇಗಾ ಯೋಜನೆಯಡಿ ಹೆಣ್ಣು- ಗಂಡು ಎಂಬ ಬೇಧವಿಲ್ಲ. ಎಲ್ಲರೂ ಸಮಾನರು ಮತ್ತು ಎಲ್ಲರಿಗೂ ಸಮಾನ ವೇತನವಿದೆ. ಅದರಂತೆ ಮತದಾನದಲ್ಲಿಯೂ ಪುರುಷ ಮತ್ತು ಮಹಿಳೆಗೆ ಸಮಾನ ಹಕ್ಕಿದೆ. ಇಬ್ಬರೂ ಮತಗಟ್ಟೆಗೆ ಬಂದು ಮತದಾನ ಮಾಡಬೇಕೆಂದು ತಿಳಿಸಿದರು.

ನರೇಗಾ ಕೂಲಿ ಕಾರ್ಮಿಕರು ಮತದಾನ ಜಾಗೃತಿ ಮತ್ತು ನರೇಗಾ ಯೋಜನೆಯ ಪ್ಲೇ ಕಾರ್ಡ್ ಗಳನ್ನು ಕೈಯಲ್ಲಿ ಹಿಡಿದು ಮತದಾನ ಜಾಗೃತಿ ಕುರಿತು ಘೋಷಣೆ ಕೂಗಿದರು. ನೆರೆದ ಎಲ್ಲರಿಗೂ ತರಬೇತಿದಾರ ಕೆ.ಎಂ. ಶೇಖ ಅವರು ಮತದಾರ ಪ್ರತಿಜ್ಞಾವಿಧಿ ಬೋಧಿಸಿದರು. ನರೇಗಾ ಧಾರವಾಡ ತಾಲೂಕು ಸಹಾಯಕ ನಿರ್ದೇಶಕ ಚಂದ್ರು ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

Chaitra Kulal

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago