ಹುಬ್ಬಳ್ಳಿ: ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಉಣಕಲ್ ಕೆರೆ ಬಳಿ ನಡೆದಿದೆ.
ದೆಹಲಿ ಪಾಸಿಂಗ್ ಹೊಂದಿರೋ ಫೊರ್ಡ್ ಕಂಪನಿ ಕಾರು. ಹುಬ್ಬಳ್ಳಿಯಿಂದ ಧಾರವಾಡ ಕಡೆ ಹೊರಟಿದ್ದ ಕಾರು, ವೇಗವಾಗಿ ಚಲಿಸುತ್ತಿರುವಾಗ ಬೆಂಕಿ ಕಾಣಿಸಿಕೊಂಡಿದೆ. ನೋಡು ನೋಡುತ್ತಲೆ ಹೊತ್ತಿ ಉರಿದ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಒಳಗಿದ್ದ ದಂಪತಿ ಕೂದಲಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕುರಿತು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.