News Karnataka Kannada
Sunday, May 19 2024
ಹುಬ್ಬಳ್ಳಿ-ಧಾರವಾಡ

ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಡಳಿತ ಸರ್ವ ಸನ್ನದ್ದ

ಲೋಕಸಭಾ ಮತಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ಜರುಗಿಸಲು ಏ.12 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಮೇ.7 ರಂದು ಧಾರವಾಡ ಲೋಕಸಭೆ ಮತಕ್ಷೇತ್ರದಲ್ಲಿ ಮುಕ್ತ, ನಿಷ್ಪಕ್ಷಪಾತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಮತದಾನ ಜರುಗಿಸಲು ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
Photo Credit : NewsKarnataka

ಧಾರವಾಡ : ಲೋಕಸಭಾ ಮತಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ಜರುಗಿಸಲು ಏ.12 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಮೇ.7 ರಂದು ಧಾರವಾಡ ಲೋಕಸಭೆ ಮತಕ್ಷೇತ್ರದಲ್ಲಿ ಮುಕ್ತ, ನಿಷ್ಪಕ್ಷಪಾತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಮತದಾನ ಜರುಗಿಸಲು ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಡಿಸಿ ಕಚೇರಿ ಸಭಾಂಗಣದ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಮೇ.7 ಮತದಾನ ಸಿದ್ದತೆ ಹಾಗೂ ಮತಗಟ್ಟೆಯಲ್ಲಿ ಮತದಾರರಿಗೆ ಕಲ್ಪಿಸಿರುವ ವ್ಯವಸ್ಥೆ, ಕಾನೂನು ಸುವ್ಯವಸ್ಥೆಗೆ ಕೈಗೊಂಡ ಕ್ರಮಗಳ ಕುರಿತು ಪತ್ರಿಕಾಗೋಷ್ಠಿ ಜರುಗಿಸಿ, ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಮಾತನಾಡಿದರು.ಧಾರವಾಡ ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ ನಿಯಮಾನುಸಾರ ಜರುಗಿಸಲು ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ಭಾರತ ಚುನಾವಣಾ ಆಯೋಗ ಅಂತಿಮವಾಗಿ ಏಪ್ರಿಲ್ 19, 2024 ರಂದು ಪ್ರಕಟಿಸಿರುವ ಮತದಾರ ಪಟ್ಟಿಯಲ್ಲಿ ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಮತಕ್ಷೇತ್ರಗಳು ಸೇರಿ 9,17,926 ಪುರುಷ, 9,13,949 ಮಹಿಳಾ, 100 ತೃತೀಯಲಿಂಗಿಗಳು ಸೇರಿ ಒಟ್ಟು 18,31,975 ಮತದಾರರಿದ್ದಾರೆ. ಇವರೆಲ್ಲರೂ ಮೇ 7 ರಂದು ಜರುಗುವ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ತಿಳಿಸಿದ್ದಾರೆ.

ಮತಗಟ್ಟೆಗಳು: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ನವಲಗುಂದ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 234 ಮತಗಟ್ಟೆಗಳಿವೆ. ಕುಂದಗೋಳ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 214 ಮತಗಟ್ಟೆಗಳಿವೆ. ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 234 ಮತಗಟ್ಟೆಗಳಿವೆ.

ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 215 ಮತಗಟ್ಟೆಗಳು ಹಾಗೂ ಹೆಚ್ಚುವರಿ 2 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 217 ಮತಗಟ್ಟೆಗಳಿವೆ. ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 258 ಮತಗಟ್ಟೆಗಳು ಹಾಗೂ 2 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 260 ಮತಾಗಟ್ಟೆಗಳಿವೆ. ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 269 ಮತಗಟ್ಟೆಗಳು ಹಾಗೂ 4 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 273 ಮತಗಟ್ಟೆಗಳಿವೆ. ಕಲಘಟಗಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 228 ಮತಗಟ್ಟೆಗಳಿವೆ.

ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಗೆ ಒಳಪಡುವ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 241 ಮತಗಟ್ಟೆಗಳಿವೆ. ಒಟ್ಟಾರೆಯಾಗಿ ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಮತಕ್ಷೇತ್ರದಲ್ಲಿ 1,893 ಮತಗಟ್ಟೆಗಳು ಹಾಗೂ 8 ಹೆಚ್ಚುವರಿ(ಅಕ್ಸಲರಿ)ಮತಗಟ್ಟೆಗಳು ಸೇರಿ 1,901 ಮತಗಟ್ಟೆಗಳಿವೆ ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

1950 ಸಹಾಯವಾಣಿ: ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ 1950 ಸಹಾಯವಾಣಿ ಮೂಲಕ ಒಟ್ಟು 950 ದೂರುಗಳು ಸ್ವೀಕೃತವಾಗಿದ್ದು, 950 ವಿಲೇವಾರಿ ಮಾಡಲಾಗಿರುತ್ತದೆ.

968 ವೈದ್ಯಕೀಯ ಸಿಬ್ಬಂದಿ: ಧಾರವಾಡ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಎಲ್ಲ 968 ಮತಗಟ್ಟೆ ಲೊಕೇಷನ್‍ಗಳಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ.

ಮತದಾನ ದಿನದಂದು ಸಿಬ್ಬಂದಿಗಳ ಸಂಚಾರಕ್ಕೆ ಹಾಗೂ ಇತರ ಚುನಾವಣಾ ಕರ್ತವ್ಯಗಳಿಗೆ ಅಗತ್ಯವಿರುವಂತೆ ಜಿಪಿಎಸ್ ಅಳವಡಿಸಿರುವ ಸುಮಾರು 200 ಬಸ್‍ಗಳು, 110 ಮ್ಯಾಕ್ಸಿ ಕ್ಯಾಬ್ ಮತ್ತು ಶಾಲಾ ವಾಹನಗಳು ಹಾಗೂ 65 ಕ್ರೂಸರ್ ಗಳು ಸೇರಿ ಒಟ್ಟು 375 ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು: 2019ರ ಧಾರವಾಡ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು 19 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು 17 ಸ್ಪರ್ಧಾಳುಗಳು ಸ್ಪರ್ಧಿಸಿದ್ದಾರೆ ಎಂದು ಅವರು ತಿಳಿಸಿದರು.

ವಿಓಇಡಿ (VOED) ಮತದಾನವು ತಹಶೀಲ್ದಾರ ಕಾರ್ಯಾಲಯದಲ್ಲಿ ಮೇ 6 ವರೆಗೆ ಮುಂದುವರೆಯಲಿದೆ ಎಂದು ಅವರು ತಿಳಿಸಿದರು. ವಿಧಾನಸಭಾ ಮತಕ್ಷೇತ್ರವಾರು ಡಿ-ಮಸ್ಟರಿಂಗ್ ಕೇಂದ್ರಗಳ ಮಾಹಿತಿ ನಾಳೆ ಮೇ. 6 ರಂದು ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಮತಕ್ಷೇತ್ರಗಳ ಕೇಂದ್ರ ಸ್ಥಾನದಲ್ಲಿ ಡಿ-ಮಸ್ಟರಿಂಗ ಕಾರ್ಯ ಜರುಗಲಿದೆ.

ಕೃವಿವಿಯಲ್ಲಿ ಮತ ಏಣಿಕೆ ಕೇಂದ್ರ ಸ್ಥಾಪನೆ ಮೇ.7 ರಂದು ಜರುಗುವ ಮತದಾನದ ಮತ ಏಣಿಕೆ ಕೇಂದ್ರವನ್ನು ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗುತ್ತದೆ. ಜೂನ 4 ರಂದು ಬೆಳಿಗ್ಗೆ 7 ಗಂಟೆಗೆ ಮತ ಏಣಿಕೆ ಕೇಂದ್ರವನ್ನು ತೆರೆಯಲಾಗುತ್ತದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಮತ್ತು ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಸ್ವಿಪ್ ಚೇರಮನ್‍ರಾದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಅವರು ಮಾತನಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು