News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಯುವ ಜನತೆ, ಮಕ್ಕಳು ಸ್ವಾತಂತ್ರ್ಯ ಹೋರಾಟ ಇತಿಹಾಸ ಅರಿಯಬೇಕೆಂಬುದು ಪ್ರಧಾನಿಯವರ ಆಶಯ

Lok Sabha Elections
Photo Credit : Facebook

ಹುಬ್ಬಳ್ಳಿ: ದೇಶಕ್ಕೆ ಸ್ವಾತಂತ್ರ್ಯ ಸುಮ್ಮನೆ ಸಿಕ್ಕಿದ್ದಲ್ಲ. ಅಹಿಂಸಾ ಹೋರಾಟದ ಜತೆಗೆ ಅಂದಾಜು 3.5 ಕೋಟಿ ಜನರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಬಂದಿದೆ. ಈ ಇತಿಹಾಸವನ್ನು ಯುವ ಜನತೆ, ಮಕ್ಕಳು ಅರಿಯಲೆಂದೇ ಪ್ರಧಾನಿಯವರು ಹರ್ ಘರ್ ತಿರಂಗಾ ಅಭಿಯಾನ ಘೋಷಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿನ ಬಿವಿಬಿ ಕಾಲೇಜಿನಲ್ಲಿ ಕೇಂದ್ರ ಸಂವಹನ ಇಲಾಖೆ, ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಹರ್ ಘರ್ ತಿರಂಗಾ ಮತ್ತು ದೇಶವಿಭಜನೆ ಕರಾಳ ನೆನಪು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹರ್ ಘರ್ ತಿರಂಗಾ ಮೂಲಕ ಪ್ರಧಾನಿ ಮೋದಿಯವರು ರಾಷ್ಟ್ರಧ್ವಜ ದ ಮಹತ್ವ ಕುಗ್ಗಿಸಿದ್ದಾರೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಆದರೆ ದೇಶದ ಯುವ ಜನತೆ ಮಕ್ಕಳು ಸ್ವಾತಂತ್ರ್ಯ ಹೋರಾಟ ಇತಿಹಾಸ ಅರಿಯಬೇಕೆಂಬುದು ಪ್ರಧಾನಿಯವರ ಆಶಯವಾಗಿದೆ ಎಂದರು.

ಬ್ರಿಟಿಷರು ಭಾರತ ಭಿಕ್ಷುಕರ ದೇಶ ಎಂದು ಮೂದಲಿಸಿದ್ದರು. ಆದರೆ ಇಂದು ಭಾರತದ ಮಹತ್ವ ವಿಶ್ವಕ್ಕೆ ಅರಿವಾಗತೊಡಗಿದೆ. ವಿಶ್ವದಲ್ಲಿ ಶಾಂತಿ ನೆಲೆಸಲು ಭಾರತದ ಪ್ರಧಾನಿ ಮೋದಿಯವರ ಮಧ್ಯಸ್ಥಿಕೆ ಅವಶ್ಯ ಎಂಬುದು ಜಗತ್ತಿನ ಅನೇಕ ರಾಷ್ಟ್ರಗಳ ನಾಯಕರ ಅನಿಸಿಕೆಯಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು