News Karnataka Kannada
Saturday, April 20 2024
Cricket
ಹುಬ್ಬಳ್ಳಿ-ಧಾರವಾಡ

ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ: ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ

There are three dangers globally: Shivananda Shivayogi Swamiji of Kodimutt
Photo Credit : News Kannada

ಹುಬ್ಬಳ್ಳಿ : ಒಂದು ಸರ್ಕಾರ ಬರುತ್ತೆ. ಸ್ಥಿರ ಸರ್ಕಾರ ಇರುತ್ತೆ ಅಂತ ಹೇಳಿದ್ದೆ ಅದು ನಿಜ ಆಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜಲಪ್ರಳಯ ಆಗುವ ಆಗುವ ಲಕ್ಷಣ ಇದೆ. ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ. ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರ ಅಕಾಲಿಕ ಮೃತ್ಯು ಆಗುವ ಸೂಚನೆ ಇದೆ. ವಿಜಯದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆ ನಡೆಯುತ್ತದೆ. ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು. ಇಲ್ಲಾ ಗಂಡಾಂತರ ಕಟ್ಟಿಟ್ಟ ಬುತ್ತಿ. ಕರುನಾಡಿಗೂ ಕೆಲವೊಂದು ಆಪತ್ತು ಇದೆ. ಭಾರತದಲ್ಲಿ ನಾನು ಹೇಳಿದಂತೆ ಒಂದು ಘಟನೆ ಆಗುತ್ತೆ ತಪ್ಪಿಸುವಂತದ್ದು ಆಳುವವರ ಕೈಯಲ್ಲಿದೆ . ಜಗತ್ತಿನ ಸಾಮ್ರಾಟರು ತಲ್ಲಣ ಆಗ್ತಾರೆ. ಬಡವರಿಗೆ ಗ್ಯಾರಂಟಿ ಒಳ್ಳೆಯದೇ. ಯಾವ ಹೆಣ್ಣಿಗೆ ಸ್ವಾತಂತ್ರ್ಯ ಇರಲಿಲ್ಲವೋ ಅಂತಹ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬಂದಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ, ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಮುಟ್ಟುತ್ತದೆ  ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು