News Karnataka Kannada
Saturday, May 11 2024
ಹುಬ್ಬಳ್ಳಿ-ಧಾರವಾಡ

ಬೈಪಾಸ್‌ನಲ್ಲಿ ನಿಲ್ಲದ ಅಪಘಾತ – ಕಾರು ಪಲ್ಟಿಯಾಗಿ ಇಬ್ಬರ ಸಾವು

Two killed as car overturns in accident that did not stop on bypass
Photo Credit : News Kannada

ಧಾರವಾಡ: ಧಾರವಾಡ ಬೆಳಗಾವಿ ಬೈಪಾಸ್ ರಸ್ತೆಯಲ್ಲಿ ಪ್ರತಿದಿನ ಒಂದಿಲ್ಲೊಂದು ಅಪಘಾತಗಳು ಸಂಭವಿಸಿ ಜನ ಸಾವನ್ನಪ್ಪುತ್ತಲೇ ಇದ್ದಾರೆ. ಮೊನ್ನೆಯಷ್ಟೇ ಬೈಕ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಕಾರು ಪಲ್ಟಿಯಾಗಿ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಧಾರವಾಡದಿಂದ ಢಾಬಾಕ್ಕೆ ಊಟಕ್ಕೆಂದು ಹೋಗಿದ್ದ ವಿನಯ್ ಹಿರೇಮಠ (24) ಹಾಗೂ ಸಂದೀಪ್ (29) ಎಂಬುವರೇ ಈ ಘಟನೆಯಲ್ಲಿ ಸಾವನ್ನಪ್ಪಿದವರು. ಊಟ ಮಾಡಿಕೊಂಡು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವ ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.

ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು