ಒಡಿಶಾ ರಾಜ್ಯದಲ್ಲಿ ನಡೆದ ರೈಲ್ವೆ ದುರಂತ ನಿಜಕ್ಕೂ ದುಃಖದ ಸಂಗತಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ : ಇಂತಹದೊಂದು ಘಟನೆ ನಡೆಯಬಾರದಿತ್ತು. ಕಳೆದ ಸುಮಾರು ವರ್ಷಗಳಿಂದ ರೈಲ್ವೆ ಇಲಾಖೆಯಲ್ಲಿ ಇಂತಹ ಘಟನೆಗಳು ಸಂಭವಿಸಿರಲಿಲ್ಲ. ಆದರೆ ಈಗ ನೂರಾರು ಜನರು ಸಾವನ್ನಪ್ಪಿರುವುದು ನಿಜಕ್ಕೂ ದುಃಖದ ಸಂಗತಿಯಾಗಿದೆ ಎಂದು ಒಡಿಶಾ ರಾಜ್ಯದಲ್ಲಿ ನಡೆದ ರೈಲ್ವೆ ದುರಂತಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ದೇವರು ಮೃತರ ಕುಟುಂಬಕ್ಕೆ ದುಃಖವನ್ನು ತಡೆಯುವ ಶಕ್ತಿ ನೀಡಲಿ. ಮೃತರ ಕುಟುಂಬಕ್ಕೆ ಹಾಗೂ ಅಪಘಾತದಲ್ಲಿ ಒಳಗಾದವರ ಕುಟುಂಬಕ್ಕೆ ಶೀಘ್ರವಾಗಿ ಪರಿಹಾರ ಕಲ್ಪಿಸುವ ಕಾರ್ಯ ತ್ವರಿತ ಗತಿಯಲ್ಲಿ ನಡೆಯುತ್ತಿವೆ. ಕೇಂದ್ರ ರೈಲ್ವೆ ಸಚಿವರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ಒದಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ‌. ಈ ಪ್ರಕರಣದ ಕುರಿತು ಕೂಡ ಉನ್ನತ ಮಟ್ಟದ ತನಿಖೆಯನ್ನು ಕೂಡ ಮಾಡುವ ಮೂಲಕ ಪರಿಶೀಲನೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago