ಧಾರವಾಡಕ್ಕೆ ಐಐಟಿ ಭದ್ರ ಬುನಾದಿ ಹಾಕಿದ್ದೇ ಕಾಂಗ್ರೆಸ್: ವಿನಯ್ ಕುಲಕರ್ಣಿ

ಧಾರವಾಡ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗ ಧಾರವಾಡಕ್ಕೆ ಐಐಟಿ ಮಂಜೂರಾಗಿತ್ತು. ಇದು ಬುನಾದಿ ಹಾಕಿದ್ದೇ ಕಾಂಗ್ರೆಸ್ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ.

ಮಾತನಾಡಿದ ಅವರು, ವಿದ್ಯಾಕಾಶಿ ಧಾರವಾಡದಲ್ಲಿ ಐಐಟಿ ಉದ್ಘಾಟನೆಯಾಗುತ್ತಿರುವುದು ನಮ್ಮೆಲ್ಲರಿಗೂ ಸಂತಸದ ವಿಷಯ. ಐಐಟಿಯನ್ನು ಕರ್ನಾಟಕಕ್ಕೆ ಕೊಟ್ಟ ವೇಳೆ ಇದು ರಾಯಚೂರಿಗೆ ಹೋಗಬೇಕು ಎಂದು ಚರ್ಚೆಗಳಾಗಿದ್ದವು. ಆಗ ನಾವೆಲ್ಲರೂ ಒಂದಾಗಿ ಹೋಗಿ ಈ ಐಐಟಿ ಕೇಂದ್ರ ಧಾರವಾಡದಲ್ಲೇ ಸ್ಥಾಪನೆಯಾಗಬೇಕು ಎಂದು ಒತ್ತಾಯ ಮಾಡಿದ್ದೆವು. ಆದರೂ ಆಗ ಐಐಟಿ ರಾಯಚೂರು ಬಿಟ್ಟು ಮೈಸೂರಿಗೆ ವರ್ಗಾವಣೆಯಾಯಿತು. ಮರಳಿ ಅದನ್ನು ಧಾರವಾಡಕ್ಕೆ ತರಲು ನಾವೆಲ್ಲ ದೊಡ್ಡ ಹೋರಾಟ ಮಾಡಬೇಕಾಯಿತು ಎಂದಿದ್ದಾರೆ.

ಅಂದು ಹೋರಾಟ ನಡೆಸಿದ ಪ್ರತಿಫಲವಾಗಿ ಇಂದು ಧಾರವಾಡದಲ್ಲಿ ಐಐಟಿ ಉದ್ಘಾಟನೆಯಾಗುತ್ತಿದೆ. ಅಂದಿನ ಕೈಗಾರಿಕಾ ಸಚಿವರಾಗಿದ್ದ ಆರ್.ವಿ ದೇಶಪಾಂಡೆ ಅವರು ಐಐಟಿಗೆ 500 ಎಕರೆ ಜಮೀನನ್ನು ಒದಗಿಸುವ ಕೆಲಸ ಮಾಡಿದರು. ಐಐಟಿ ಇಲ್ಲಿಗೆ ಬರಬೇಕಾದರೆ ಹಲವಾರು ಕಾಯ್ದೆಗಳಿದ್ದವು. ರೈಲ್ವೆ ಮಾರ್ಗ, ವಿಮಾನ ಸೌಕರ್ಯ, ಬಸ್ ಸೌಕರ್ಯ ಎಲ್ಲವನ್ನೂ ನಾವು ತೋರಿಸಿದ್ದೆವು. ಬಿಜೆಪಿ ಮುಖಂಡರು ಕೂಡ ನಮ್ಮ ಜೊತೆ ಸೇರಿ ಕೆಲಸ ಮಾಡಿದ್ದರು. ಎಲ್ಲರೂ ಸೇರಿ ಐಐಟಿ ಧಾರವಾಡಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದರು.

ನಾವು ಈ ಹಿಂದೆ ಬೇಡಿಕೆ ಇಟ್ಟಂತೆ ಈ ಐಐಟಿಯಲ್ಲಿ 25%ರಷ್ಟು ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಬೇಕು. ಐಐಟಿಗೆ ಭೂಮಿ ನೀಡಿದಂತಹ ಮಕ್ಕಳಿಗೆ ಅಲ್ಲಿ ಡಿ ದರ್ಜೆ ಕೆಲಸ ನೀಡಬೇಕು. ನಾಳೆ ನಡೆಯುವ ಉದ್ಘಾಟನೆ ವೇಳೆ ಇದನ್ನು ಘೋಷಣೆ ಮಾಡಬೇಕು ಎಂದು ವಿನಯ್ ಕುಲಕರ್ಣಿ ಆಗ್ರಹಿಸಿದ್ದಾರೆ.

Gayathri SG

Recent Posts

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

6 mins ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

21 mins ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

38 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

51 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

2 hours ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

2 hours ago