ವಿನಯ ಕುಲಕರ್ಣಿಗೆ ಗೆಲುವು: ಪತ್ನಿ ಶಿವಲೀಲಾ ಕುಲಕರ್ಣಿ ಹರ್ಷ

ಧಾರವಾಡ : ಧಾರವಾಡ ಜಿಲ್ಲೆಯ ಗಡಿ ಭಾಗದಲ್ಲೇ ನಿಂತು ಚುನಾವಣೆ ಮಾಡಿದ ವಿನಯ್ ಕುಲಕರ್ಣಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿಯವರ ವಿರುದ್ಧ 18 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರು ಸತತ ಎರಡನೇ ಬಾರಿಯೂ ಗೆಲುವಿನ ಲೆಕ್ಕಾಚಾರದಲ್ಲಿದ್ದರು. ಆದರೆ, ಮತದಾರನ ಅಂತಿಮ ನಿರ್ಣಯವೇ ಬೇರೆಯಾಗಿತ್ತು.

ಅಂಚೆ ಮತ ಎಣಿಕೆಯಿಂದಲೇ ಮುನ್ನಡೆ ಕಾಯ್ದುಕೊಂಡು ಬಂದ ವಿನಯ್ ಕುಲಕರ್ಣಿ ಕೊನೆಯ ಸುತ್ತಿನವರೆಗೂ ಮುನ್ನಡೆ ಕಾಯ್ದುಕೊಂಡೇ ಬಂದು ಗೆಲುವು ಸಾಧಿಸಿದರು. ಧಾರವಾಡ ಗ್ರಾಮೀಣ ಕ್ಷೇತ್ರದ ಈ ಚುನಾವಣೆ ಇಡೀ ರಾಜ್ಯದ ಗಮನಸೆಳೆದಿತ್ತು. ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿಯವರ ಪತ್ನಿ ಶಿವಲೀಲಾ ಕುಲಕರ್ಣಿ ಹಾಗೂ ಅವರ ಮಕ್ಕಳು ಅಬ್ಬರದ ಪ್ರಚಾರ ನಡೆಸಿದ್ದರು. ಕೊನೆಗೂ ಶಿವಲೀಲಾ ಕುಲಕರ್ಣಿ ಅವರ ಹೋರಾಟಕ್ಕೆ ಗೆಲುವು ಸಿಕ್ಕಂತಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಾನೇ ವಿನಯ್ ಕುಲಕರ್ಣಿ ಎಂದು ಅಭಿಯಾನ ಕೂಡ ಆರಂಭಿಸಿದ್ದರು. ತಳಮಟ್ಟದಿಂದ ಕಾಂಗ್ರೆಸ್ ಕಾರ್ಯಕರ್ತರು ದೊಡ್ಡಮಟ್ಟದಲ್ಲಿ ಕಸರತ್ತು ನಡೆಸಿದ್ದರಿಂದ ಕ್ಷೇತ್ರಕ್ಕೆ ವಿನಯ್ ಕುಲಕರ್ಣಿ ಕಾಲಿಡದಿದ್ದರೂ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯವರು ಕೂಡ ಅಬ್ಬರದ ಪ್ರಚಾರವನ್ನೇ ನಡೆಸಿದ್ದರು. ನಿರೀಕ್ಷೆಗೂ ಮೀರಿ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ ಎಂದರು.

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

7 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

7 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

8 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

8 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

9 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

9 hours ago