News Karnataka Kannada
Sunday, May 19 2024
ಹುಬ್ಬಳ್ಳಿ-ಧಾರವಾಡ

ಕೆಲ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀ‌ರ್ ಎಂಬುವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತಷ್ಟು ವಿಡಿಯೋಗಳು ವೈರಲ್ ಆಗಿವೆ.
Photo Credit : NewsKarnataka

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀ‌ರ್ ಎಂಬುವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತಷ್ಟು ವಿಡಿಯೋಗಳು ವೈರಲ್ ಆಗಿವೆ.

ಗೌಪ್ಯ ಮತದಾನ ಮಾಡಬೇಕೆಂದು ನಿಯಮವಿದ್ದರೂ ನಿಯಮಗಳನ್ನು ಉಲ್ಲಂಘನೆ ಮಾಡಿದ ಕೆಲ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿರುವ ವಿಡಿಯೋ ವೈರಲ್ ಮಾಡಿದ್ದಾರೆ.

ಮತಗಟ್ಟೆಯಲ್ಲಿ ಮೊಬೈಲ್ ಉಪಯೋಗಕ್ಕೆ ಅವಕಾಶ ಇಲ್ಲ. ಆದರೂ ಮೊಬೈಲ್‌ನ್ನ ಮತಗಟ್ಟೆಗೆ ತೆಗೆದುಕೊಂಡ ಹೋಗಿ ಮತದಾನವನ್ನ ಬಹಿರಂಗ ಮಾಡಿದ ಕೆಲ ಬಿಜೆಪಿಯ ಕಾರ್ಯಕರ್ತರು ಹಾಗೂ ಮತದಾರರಾದ ಪ್ರತಿಕ್ ಹಬೀಬ್‌, ಗಣೇಶ್ ಡೊಂಗಡೆ, ಸುನಿಲ್ ಬಾಕಳೆ, ಅಕ್ಷಯ ಮಗಜಿಕೊಂಡಿ ಬಿಜೆಪಿ ಪಕ್ಷಕ್ಕೆ ಮತ ಹಾಕಿ ವಿಡಿಯೋ ಮಾಡಿಕೊಂಡು ತಮ್ಮ ತಮ್ಮ ಫೇಸ್ ಬುಕ್ ನಲ್ಲಿ ಸ್ಟೇಟ್ಸ್ ಹಾಕಿಕೊಂಡಿದ್ದು, ಇವರ ವಿರುದ್ಧ ಇದೀಗ ಚುನಾವಣೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು