ಮೆಹಂದಿ ಹಾಗೂ ರಂಗೋಲಿಯಲ್ಲಿ ಚಿತ್ತಾರಗೊಂಡ ಮತದಾನ ಜಾಗೃತಿ

ಧಾರವಾಡ : ಜಿಲ್ಲೆಯಾದ್ಯಂತ ನಡೆಯುತ್ತಿರುವ ಮತದಾರರ ಜಾಗೃತಿ ಚಟುವಟಿಕೆಗಳು ದಿನೇ ದಿನೇ ರಂಗು ಪಡೆಯುತ್ತಿವೆ. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಲ್ಲಿ ಹಾಗೂ ಹೊಸದಾಗಿ ಮತದಾನಕ್ಕೆ ಅರ್ಹತೆ ಪಡೆದುಕೊಂಡಿರುವ ಯುವ ಜನರನ್ನು ಮತದಾನಕ್ಕೆ ಪ್ರೋತ್ಸಾಹಿಸುವ ಉದ್ದೇಶದಿಂದ ಜಿಲ್ಲಾ ಸ್ವೀಪ್ ಸಮಿತಿ ನಡೆಸುತ್ತಿರುವ ವಿಶಿಷ್ಟ ಆಕರ್ಷಣೀಯ ಕಾರ್ಯಕ್ರಮಗಳು ಚುನಾವಣಾ ಹಬ್ಬದ ವಾತಾವರಣ ನಿರ್ಮಿಸುತ್ತಿವೆ. ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಲ್ಲಿ ಮತದಾನದ ಜಾಗೃತಿ ಮೂಡಿಸಲು ಮೆಹಂದಿ ಕಾರ್ಯಾಗಾರ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾಗಿತ್ತು.

 

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆಯಾಗಿರುವ ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ. ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಧಾರವಾಡ ನಗರದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮೆಹಂದಿ ಹಾಗೂ ರಂಗೋಲಿ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಡಿಎಚ್‍ಓ. ಡಾ. ಶಶಿ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ. ಉಪಸ್ಥಿತರಿದ್ದರು.

Nisarga K

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago