News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ತಪ್ಪದೇ ಪ್ರತಿಯೊಬ್ಬರು ಮತ ಚಲಾಯಿಸುವಂತೆ ಜಾಗೃತಿ ಮೂಡಿಸಿ : ಡಿಸಿ ದಿವ್ಯ ಪ್ರಭು

ಭಾರತದ ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ಮತ್ತು ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವು ಆಗಿದೆ. ಆದ್ದರಿಂದ ಅರ್ಹ ಪ್ರತಿಯೊಬ್ಬರು ಬರುವ ಮೇ 7 ರಂದು ತಪ್ಪದೇ ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
Photo Credit : NewsKarnataka

ಧಾರವಾಡ: ಭಾರತದ ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ಮತ್ತು ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವು ಆಗಿದೆ. ಆದ್ದರಿಂದ ಅರ್ಹ ಪ್ರತಿಯೊಬ್ಬರು ಬರುವ ಮೇ 7 ರಂದು ತಪ್ಪದೇ ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಸಂಯುಕ್ತವಾಗಿ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ವಾಕಾಥಾನ್ ಹಾಗೂ ಕಲಾ ತಂಡಗಳ ಜಾಥಾ ಕಾರ್ಯಕ್ರಮಕ್ಕೆ ವಾದ್ಯ ಬಾರಿಸುವ ಮೂಲಕ ಚಾಲನೆ ನೀಡಿ, ಮಾತನಾಡಿದರು.

ಮತದಾನ ಹೆಚ್ಚಿಸುವಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಸ್ವೀಪ್ ಸಮಿತಿಯಿಂದ ಮುಖ್ಯವಾಗಿ ಎರಡು ಕಾರ್ಯಗಳನ್ನು ಮಾಡಲಾಗುತ್ತದೆ. ಪ್ರತಿ ಮತದಾರನಿಗೆ ಮತದಾನದ ಮಹತ್ವ ತಿಳಿಸಿ, ಅರಿವು ಮೂಡಿಸಿ ತಪ್ಪದೇ ಮತದಾನ ಮಾಡುವಂತೆ ಮಾಡುವುದು ಮತ್ತು ಪ್ರತಿ ಅರ್ಹ ಮತದಾರನು ಮತದಾರ ಪಟ್ಟಿಯಲ್ಲಿ ತಪ್ಪದೇ ತನ್ನ ಹೆಸರು ಸೇರ್ಪಡೆ ಆಗಿರುವ ಬಗ್ಗೆ ಖಾತರಿ ಮಾಡಿಕೊಳ್ಳಲು ತಿಳಿಸುವದಾಗಿದೆ ಎಂದು ಅವರು ಹೇಳಿದರು.

ಏಪ್ರಿಲ್ 9 ರವರೆಗೆ ಮತದಾರ ಪಟ್ಟಿಗೆ ಸೇರಲು ಅವಕಾಶ: ಮತದಾರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರು ರದ್ದುಪಡಿಸುವುದು ಸೇರಿದಂತೆ ಎಲ್ಲ ಕಾರ್ಯಗಳು ವರ್ಷಪೂರ್ತಿ ನಿರಂತರವಾಗಿ ನಡೆಯುತ್ತಿರುತ್ತವೆ. ಬರುವ ಮೇ 7 ರಂದು ಜರುಗುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶಕ್ಕಾಗಿ ಮತದಾರಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ನಮೂನೆ 6 ನ್ನು ಸಲ್ಲಿಸಲು ಬರುವ ಏಪ್ರಿಲ್ 9 ರ ವರೆಗೆ ಅವಕಾಶವಿದೆ. ಅಗತ್ಯ ದಾಖಲೆಗಳೊಂದಿಗೆ ಅರ್ಹತೆ ಇದ್ದು ಮತದಾರ ಪಟ್ಟಿಗೆ ಹೆಸರು ಸೆರ್ಪಡೆ ಆಗದಿರುವ ವಯಸ್ಕರು ಏಪ್ರಿಲ್ 9 ರ ವರೆಗೂ ಅವಕಾಶವಿದ್ದರೂ ಅಲ್ಲಿಯವರೆಗೂ ಕಾಯದೇ ಇಂದೇ ಅರ್ಜಿ ಸಲ್ಲಿಸಿ, ಮತದಾರ ಪಟ್ಟಿಗೆ ತಮ್ಮ ಹೆಸರು ಸೇರಿಸಲು ಕ್ರಮವಹಿಸಿ ಎಂದು ಡಿಸಿ ದಿವ್ಯ ಪ್ರಭು ಅವರು ಹೇಳಿದರು.

ನಗರ ಪ್ರದೇಶದಲ್ಲಿ ಮತದಾನ ಜಾಗೃತಿಗೆ ಆದ್ಯತೆ: ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ 9 ಮತಗಟ್ಟೆಗಳಲ್ಲಿ ಕಡಿಮೆ ಮತದಾನವಾಗಿದೆ. ಜಿಲ್ಲೆಯ ಶೇಕಡಾವಾರು ಮತದಾನ 70 ರಷ್ಟು ಆಗಿದ್ದು, ಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ.90 ಕ್ಕಿಂತಲೂ ಹೆಚ್ಚು ಆಗುವಂತೆ ಮಾಡಲು ಕಡಿಮೆ ಮತದಾನದ ಮತಗಟ್ಟೆಗಳನ್ನು ಮತ್ತು ಅವುಗಳ ಸುತ್ತಲಿನ ಮತಗಟ್ಟೆಗಳನ್ನು ಕೇಂದ್ರಿಕರಿಸಿ, ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ. ನಗರಪ್ರದೇಶದ ಮತದಾನ ಕಡಿಮೆ ಆಗಿದ್ದು, ಈ ಸಲ ನಗರ ಭಾಗದ ಎಲ್ಲ ಮನೆಮನೆಗೆ ಮತದಾನದ ಮಹತ್ವ ಸಾರುವ ಸಂದೇಶ ತಲುಪುವಂತೆ ಸ್ವೀಪ್ ಸಮಿತಿ ಕಾರ್ಯ ಮಾಡಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಅದು ಎಲ್ಲರನ್ನು ಒಳಗೊಳ್ಳುವ ಮತದಾನವಾಗಬೇಕು. ಅದಕ್ಕಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯಾದ್ಯಂತ ವಿಭಿನ್ನವಾದ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದು ಅವರು ಹೇಳಿದರು.

ಮೇ 7ರ ಮತದಾನ ಪೂರ್ವದ ಎರಡು ದಿನಗಳವರೆಗೆ ಅಂದರೆ ಮೇ.5 ರ ವರೆಗೆ ಪ್ರತಿ ವಾರ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ ಮಟ್ಟ, ತಾಲೂಕು ಮಟ್ಡ ಹಾಗೂ ಜಿಲ್ಲಾಮಟ್ಟದಲ್ಲಿ ಮೂರು ಪ್ರಕಾರದಲ್ಲಿ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈಗಾಗಲೇ ಎಲ್ಲ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಕಾರ್ಯಕ್ರಮ ಸಿದ್ದಗೊಳಿಸಲಾಗಿದೆ. ಅದರಂತೆ ಇಂದು ಧಾರವಾಡ ನಗರದಲ್ಲಿ ಸರಕಾರಿ ಅಧಿಕಾರಿಗಳ, ವಿದ್ಯಾರ್ಥಿಗಳ ವಾಕಾಥಾನ್ ಮತ್ತು ಕಲಾತಂಡಗಳ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಈಗಾಗಲೇ ಅಲ್ಲಿನ ಗ್ರಾಮದ ಪ್ರಮುಖರು, ಜನಪ್ರತಿನಿಧಿಗಳು, ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪ್ರತಿ ವಾರ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಅನುμÁ್ಠನಗೊಳಿಸಲಾಗುತ್ತಿದೆ. ಜನರ ಸಹಭಾಗಿತ್ವದಲ್ಲಿ ಚುನಾವಣೆ, ಮತದಾರಪಟ್ಟಿ, ಮತದಾನ ಜಾಗೃತಿಗೆ ಜಿಲ್ಲಾ ಸ್ವೀಪ್ ಸಮಿತಿ ತೊಡಗಿಸಿಕೊಂಡಿದೆ ಎಂದು ಸ್ವೀಪ್ ನೋಡಲ್ ಅಧಿಕಾರಿ ಸ್ವರೂಪ ಟಿ.ಕೆ. ಅವರು ತಿಳಿಸಿದರು.

ಆಲೂರು ವೃತ್ತದಲ್ಲಿ ಮಾನವಸರಪಳಿ ನಿರ್ಮಾಣ: ಮತದಾರರಿಗೆ ಮತದಾನ ಪ್ರತಿಜ್ಞೆ ಬೋಧನೆ: ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭವಾದ ವಾಕಾಥಾನ್ ಮತ್ತು ಕಲಾ ತಂಡಗಳ ಜಾಥಾವು ಉಳವಿ ಚನ್ನಬಸವೇಶವರ ವೃತ್ತ, ಕೋರ್ಟ್ ಸರ್ಕಲ್, ಆಲೂರು ವೆಂಕಟರಾವ್ ವೃತ್ತಕ್ಕೆ ಬಂದು ತಲುಪಿತು.ಆಲೂರು ವೃತ್ತದಲ್ಲಿ ಸರಕಾರಿ ನೌಕರರು, ವಿದ್ಯಾರ್ಥಿಗಳು ಮತ್ತು ಕಲಾ ತಂಡಗಳ ಕಲಾವಿದರು ಮಾನವ ಸರಪಳಿ ರೂಪಿಸಿ, ಮತದಾನ ಜಾಗೃತಿ ಘೋಷಣೆಗಳನ್ನು ಕೂಗಿ, ವಾಹನ ಸವಾರರ, ಸಾರ್ವಜನಿಕರ ಗಮನ ಸೆಳೆದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಸಿಇಓ ಸ್ವರೂಪ ಟಿ.ಕೆ.,ಅವರು ಸಾರ್ವಜನಿಕರಿಗೆ, ನೆರೆದವರಿಗೆ ಮತದಾರ ಪ್ರತಿಜ್ಞೆ ಬೋಧಿಸಿದರು. ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣ ತಲುಪಿದ ವಾಕಾಥಾನ್ ಮತ್ತು ಕಲಾ ತಂಡಗಳ ಜಾಥಾ ಸಮಾಪ್ತಿಗೊಂಡಿತು.

ವಾಕಾ ಥಾನ್ ಮತ್ತು ಕಲಾ ತಂಡಗಳ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಪೆÇಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಸುಜಾತಾ ಹಸವಿಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭಾ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸರಕಾರಿ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ, ಮಹಾನಗರಪಾಲಿಕೆಯ ವಲಯಾಧಿಕಾರಿಗಳು, ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಅಧಿಕಾರಿಗಳು, ಸಿಬ್ಬಂದಿಗಳು, ಕಲಾ ತಂಡಗಳ ಕಲಾವಿದರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು