ಬೆಳಗಾವಿ ಟಿಕೆಟ್ ಸಿಕ್ಕೇ ಸಿಗುತ್ತೆ : ಶೆಟ್ಟರ್ ವಿಶ್ವಾಸ

ಹುಬ್ಬಳ್ಳಿ: ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ, ಬೆಳಗಾವಿ ಟಿಕೆಟ್ ಸಿಕ್ಕೇ ಸಿಗುತ್ತೆ, ನಾಳೆ ಅಥವಾ ನಾಡಿದ್ದು ಲಿಸ್ಟ್ ಬಿಡುಗಡೆಯಾಗುತ್ತದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ವಿಶ್ವಾಸ ವ್ಯಕ್ತಪಡಿಸಿದರು.

ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ವರಿಷ್ಠರನ್ನು ನಾನು ಭೇಟಿಯಾಗಿದ್ದೇನೆ. ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆಯೂ ಚರ್ಚಿಸಿದ್ದೇನೆ. ಬಿಜೆಪಿ ಸ್ಥಳೀಯ ನಾಯಕರು ಜೊತೆಯ ಸಮಾಲೋಚನೆ ಮಾಡಿದ್ದೇನೆ.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದ್ದೇನೆ. ಪ್ರಧಾನಿ ನೇತೃತ್ವದಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಅಭ್ಯರ್ಥಿಗಳ ಲಿಸ್ಟ್ ಫೈನಲ್ ಆಗುತ್ತದೆ. ಹೈಕಮಾಂಡ್ ನಾಯಕರಿಗೆ ಚರ್ಚಿಸಿದಾಗ ಸಕಾರಾತ್ಮಕ ಸ್ಪಂದನ ಸಿಕ್ಕಿದೆ ಎಂದರು.

ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋ ವಿಶ್ವಾಸವಿದೆ. ನಾಳೆ ಅಥವಾ ನಾಡಿದ್ದು ಟಿಕೆಟ್ ಫೈನಲ್ ಆಗುತ್ತದೆ. ಪ್ರಭಾಕರ ಕೋರೆ, ಕವಟಗಿ ಮಠ ಮೊದಲಾದವರ ಜೊತೆ ಚರ್ಚಿಸಿದ್ದೇನೆ. ಯಾರಿಗೇ ಟಿಕೆಟ್ ಕೊಟ್ಟರೂ ಒಟ್ಟಾಗಿ ಕೆಲಸ ಮಾಡೋಣ ಅಂತ ತೀರ್ಮಾನಿಸಿದ್ದೇವೆ.

Gayathri SG

Recent Posts

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

1 min ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

20 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

30 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago