News Karnataka Kannada
Saturday, May 18 2024
ಹುಬ್ಬಳ್ಳಿ-ಧಾರವಾಡ

ಕರ್ನಾಟಕ ವಿವಿ ಪ್ರಾಧ್ಯಾಪಕಿ ಚೇಂಬರ್​ನಲ್ಲಿ ವಾಮಾಚಾರ

 ವಾಮಾಚಾರ ಮಾಡಿರುವ ಘಟನೆ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಚೇಂಬರ್‌ನಲ್ಲಿ ನಡೆದಿದೆ.
Photo Credit : News Kannada

ಧಾರವಾಡ:  ವಾಮಾಚಾರ ಮಾಡಿರುವ ಘಟನೆ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಚೇಂಬರ್‌ನಲ್ಲಿ ನಡೆದಿದೆ. ವಿಭಾಗದ ಈ ಬಗ್ಗೆ ಕುಲಪತಿಗೆ ದೂರು ನೀಡಲಾಗಿದೆ.

ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಮಾ ಗುಂಡೂರಾವ್‌ ಅವರು ರಜೆ ಮೇಲೆ ತೆರಳಿದ್ದರು. ಶುಕ್ರವಾರ ವಾಪಸ್ ಆಗಮಿಸಿದಾಗ ಚೇಂಬರ್‌ನ ಕೀಲಿ ತೆಗೆದಾಗ ವಾಮಾಚಾರ ಮಾಡಿರುವುದು ತಿಳಿದು ಬಂದಿದೆ.
ಪ್ರಾಧ್ಯಾಪಕರೊಬ್ಬರ ಮೇಲೆ ಶಂಕೆ ವ್ಯಕ್ತವಾಗಿದೆ.

ಟೇಬಲ್ ಮೇಲೆ ಕಪ್ಪು ಬಣ್ಣದ ಮಾಟದ ಗೊಂಬೆ, 3 ಲಿಂಬೆ ಹಣ್ಣು , ಅರಿಷಿಣ-ಕುಂಕುಮ ಹಾಕಲಾಗಿತ್ತು. ಕಿಟಕಿ ಮೂಲಕ ಈ ಕೃತ್ಯ ಎಸಗಲಾಗಿದೆ. ಎರಡು ದಿನಗಳ ಹಿಂದೆ ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಡಾ. ರಮಾ, ಕುಲಪತಿಗೆ ದೂರು ನೀಡಿದ್ದಾರೆ. ಅವರ ಅಳಿಯ ಇದೇ ವಿಭಾಗದಲ್ಲಿ ಉಪನ್ಯಾಸಕರಾಗಿದ್ದು, ರಮಾ ಚೇಂಬರ್‌ ಬಿಟ್ಟು ಕೊಡುವ ವಿಷಯವಾಗಿ ವಿದ್ಯಾರ್ಥಿಗಳ ಎದುರೇ ಮಾವ-ಅಳಿಯ ಬಂದು ಗಲಾಟೆ ಮಾಡಿದ್ದರು. ನಾಲ್ಕು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಇದೀಗ ಮತ್ತೆ ರಮಾ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಅನುಮಾನ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು