ಧಾರವಾಡ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ನಗರದ ಆರ್ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ಜರುಗಿತು.
ಶಾಸಕ ಎನ್.ಎಚ್.ಕೋನರಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಸಸಿಗೆ ನೀರು ಹಾಕಿ, ಸಾಮೂಹಿಕ ಯೋಗಾಭ್ಯಾಸ ಉದ್ಘಾಟಿಸಿದರು. ಧಾರವಾಡ ತಹಶೀಲ್ದಾರ್ ಡಾ.ಮೋಹನ ಭಸ್ನೆ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಪಿ.ಪೂಜಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಸರಶಟ್ಟಿ ಇದ್ದರು. ಯೋಗ ಪಟು ಜಗದೀಶ ಮಳಗಿ ಅವರು ಸಾಮೂಹಿಕ ಯೋಗಾಭ್ಯಾಸದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು.
ಸಾಮೂಹಿಕ ಯೋಗಾಭ್ಯಾಸದಲ್ಲಿ ಪತಂಜಲಿ ಸಂಸ್ಥೆಯ ಯೋಗ ಸಾಧಕರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿ, ಯೋಗ ಪ್ರದರ್ಶಿಸಿದರು.
ನಂತರ ಯೋಗ ವೇದಿಕೆಯಲ್ಲಿ ಹುಬ್ಬಳ್ಳಿ ನಗರದ ಜನತಾಬಜಾರ ಸರಕಾರಿ ಹಿರಿಯ ಪ್ರಾಥಮಿಕ ಶಾಕೆಯ ಮಕ್ಜಳ ಸಾಹಿತ್ಯ ಪರಿಷತ್ ವಿದ್ಯಾರ್ಥಿಗಳಾದ ಪಲ್ಲಿವಿ ಚಾಕಲಬ್ಬಿ, ಸುಮನ್ ಟೊಪನ್ನವರ, ಪ್ರಿಯಾಂಕಾ, ಅರ್ಚನಾ, ಮನಿಷಾ ಅವರು ಜಾನಪದ ನೃತ್ಯ ಪ್ರದರ್ಶಿಸಿದರು. ಸಂಜೀವ ದುಮಕನಾಳ ನೃತ್ಯ ನಿರ್ದೇಶಿಸಿದರು.
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…
ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…