News Karnataka Kannada
Sunday, May 05 2024
ಬೆಳಗಾವಿ

ಬಸ್​​​ ನಿಲ್ಲಿಸಿಲ್ಲವೆಂದು ನಿರ್ವಾಹಕ, ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ಬಸ್‌ ನಿಲ್ಲಿಸಲಿಲ್ಲ ಎಂದು ಬಸ್‌ ನಿರ್ವಾಹ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆ ಬೈಲಹೊಂಗಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಪೊಲೀಸ್ ಠಾಣೆ ಬಳಿ ಜಮಾವಣೆಯಾದ ಬಸ್‌ ಸಿಬ್ಬಂಧಿ ಹಲ್ಲೆ ಮಾಡಿದವರನ್ನ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
Photo Credit : NewsKarnataka

ಬೆಳಗಾವಿ : ಬಸ್‌ ನಿಲ್ಲಿಸಲಿಲ್ಲ ಎಂದು ಬಸ್‌ ನಿರ್ವಾಹ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆ ಬೈಲಹೊಂಗಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಪೊಲೀಸ್ ಠಾಣೆ ಬಳಿ ಜಮಾವಣೆಯಾದ ಬಸ್‌ ಸಿಬ್ಬಂಧಿ ಹಲ್ಲೆ ಮಾಡಿದವರನ್ನ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಚಲಿಸುವ ವೇಳೆ ಬಸ್ ಹತ್ತಿದ ಮಹಿಳೆಗೆ, ಬಸ್​ ಹೊರಡುವಾಗ ಹತ್ತಬೇಡ ಎಂದು ನಿರ್ವಾಹಕ ಬುದ್ದಿವಾದ ಹೇಳಿದ್ದಾನೆ. ಈ ವೇಳೆ ಮಹಿಳೆ ನಿರ್ವಾಹಕನಿಗೆ ಬೈಯ್ದಿದ್ದಾರೆ. ಇದರಿಂದ ಮಾತಿನ ಚಕಮಕಿಯಾಗಿ ಚಾಲಕ ಬಸ್ ನಿಲ್ಲಿಸಿದ್ದಾನೆ. ಅದೇ ಸಮಯಕ್ಕೆ ಅಲ್ಲೇ ಸ್ಥಳದಲ್ಲಿದ್ದ ಕೆಲ ಯುವಕರ ಗುಂಪು ನಿರ್ವಾಹಕ ಮತ್ತು ಚಾಲಕನ ಮೇಲೆ ಹಲ್ಲೆ‌ ನಡೆಸಿದೆ.ಇನ್ನು ಈ ವೇಳೆ ಜಗಳ ಬಿಡಿಸಲು ಬಂದ ಚಾಲಕರ ಮೇಲೆಯೂ ಹಲ್ಲೆ ಮಾಡಿದ ಯುವಕರು, ಬಸ್ ನಿಲ್ದಾಣದಲ್ಲಿದ್ದ ಕಂಟ್ರೋಲರ್ ಕೊಠಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ.

ಇದರಿಂದ ರೊಚ್ಚಿಗೆದ್ದ ಚಾಲಕರು ಮತ್ತು ನಿರ್ವಾಹಕರು ಬೈಲಹೊಂಗಲ ಬಸ್ ನಿಲ್ದಾಣದಿಂದ ಹೊರಡುವ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಪ್ರತಿಭಟನೆ ಸ್ಥಳಕ್ಕೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಭೇಟಿ ನೀಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು