News Karnataka Kannada
Monday, April 29 2024
ಬೆಳಗಾವಿ

ಮಾದಕ ವಸ್ತುಗಳ ಮಾರಾಟ: ಹುಕ್ಕಾ ಬಾರ್, ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ದಾಳಿ

ಮಾದಕ ವಸ್ತುಗಳ ಮಾರಾಟಕ್ಕೆ ಕೇಂದ್ರ ಸರ್ಕಾರದ ನಿಷೇಧವಿದ್ದರೂ ಕೂಡ ಮಾರಾಟ ಮಾಡಲಾಗುತ್ತಿದೆ ಮತ್ತೆ ಪದೇ ಪದೇ ಪೊಲೀಸರು ದಾಳಿ ಮಾಡಿ ವಶಪಡಿಸಿಕೊಳ್ಳುತಿದ್ದಾರೆ. ಇಂತಹದೇ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Photo Credit : News Kannada

ಬೆಳಗಾವಿ: ಮಾದಕ ವಸ್ತುಗಳ ಮಾರಾಟಕ್ಕೆ ಕೇಂದ್ರ ಸರ್ಕಾರದ ನಿಷೇಧವಿದ್ದರೂ ಕೂಡ ಮಾರಾಟ ಮಾಡಲಾಗುತ್ತಿದೆ ಮತ್ತೆ ಪದೇ ಪದೇ ಪೊಲೀಸರು ದಾಳಿ ಮಾಡಿ ವಶಪಡಿಸಿಕೊಳ್ಳುತಿದ್ದಾರೆ. ಇಂತಹದೇ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಹುಕ್ಕಾ ಬಾರ್ ಮತ್ತು ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಈ ವೇಳೆ ದೇಶದಲ್ಲಿ ನಿಷೇಧಿತ ಇ-ಸಿಗರೆಟ್ ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಸೀಜ್ ಮಾಡಲಾಗಿದೆ.  ಜೊತೆಗೆ ಮಂಗಳೂರು ಮೂಲದ ಅಬುಬ್ಕರ್ ಸಿದ್ದಿಕ್, ಶಬಾಬ್ ಅಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ.

ಟಿಳಕವಾಡಿಯ ಗ್ಯಾಲರಿ ಸ್ಮೋಕ್ & ಚಾಕಲೇಟ್ ಗಿಫ್ಟ್ & ಮೋರ್ ಮೇಲೆ ದಾಳಿ ನಡೆಸಲಾಗಿದ್ದು, ಯಾವುದೇ ಲೈಸೆನ್ಸ್ ಇಲ್ಲದೇ ಅನಧಿಕೃತವಾಗಿ ಮಳಿಗೆಯಲ್ಲಿ ಸುರಂಗ ಮಾರ್ಗ ನಿರ್ಮಿಸಿ ಹುಕ್ಕಾ ಮಾರಾಟ ಮಾಡಲಾಗುತ್ತಿತ್ತು.

ಇನ್ನು ದಾಳಿ ವೇಳೆ 5.53 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದರೆ, ಹುಕ್ಕಾ, ರೋಲ್ ಪೇಪರ್, ಚಾರ್ಕಕೋಲ್, ವಿದೇಶಿ ಸಿಗರೆಟ್, ತಂಬಾಕಿನ ಪಾಕೇಟ್​ಗಳನ್ನು ಜಪ್ತಿ ಪಡೆಯಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು