ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳ ಜೊತೆಗೆ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾದ ಸಾತ್ವಿಕ್(5), ಒಂದು ವರ್ಷದ ಮುತ್ತಪ್ಪ, 30 ವರ್ಷದ ಯಲ್ಲವ್ವ ಕರಿಹೊಳ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು.
ಇಂದು ಗಂಡನ ಜೊತೆಗೆ ಜಗಳವಾಡಿದ್ದ ಪತ್ನಿ ಯಲ್ಲವ್ವ, ಇದರ ಮನನೊಂದು ಮಧ್ಯಾಹ್ನದ ವೇಳೆಗೆ ಮಕ್ಕಳ ಜೊತೆಗೆ ಬಾವಿಗೆ ಹಾರಿ ಕೊನೆಯುಸಿರೆಳೆದಿದ್ದಾರೆ. ಮೂವರ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
Ad