News Karnataka Kannada
Friday, April 12 2024
Cricket
ಗದಗ

ಈಶ್ವರಪ್ಪ ರಾಜೀನಾಮೆ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗಿಲ್ಲ: ಬಸವರಾಜ ಬೊಮ್ಮಾಯಿ

Basavaraj Bommai (1)
Photo Credit :

ಗದಗ:  ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಗೃಹಮಂತ್ರಿಯಾಗಿದ್ದ ಕೆ.ಜೆ.ಜಾರ್ಜ್‌ ರನ್ನು ಪೊಲೀಸರು ತನಿಖೆ ವೇಳೆಯಲ್ಲಿ ಬಂಧಿಸಿರಲಿಲ್ಲ, ಪ್ರಕರಣ ಸಿಬಿಐಗೆ ವರ್ಗಾವಣೆಗೊಂಡ ನಂತರವೂ ಜಾರ್ಜ್‌ ಬಂಧನವಾಗಿರಲಿಲ್ಲ.

ಇದೀಗ ಈಶ್ವರಪ್ಪ ಮೇಲಿನ ಪ್ರಕರಣವೂ ತನಿಖೆ ಹಂತದಲ್ಲಿದೆ. ಈಶ್ವರಪ್ಪ ರಾಜೀನಾಮೆ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಮುಖಂಡರಿಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವುದು ತನಿಖಾಧಿಕಾರಿಗಳಿಗೆ ಬಿಟ್ಟದ್ದು, ಮುಂದಿನ ದಿನಗಳಲ್ಲಿ ತನಿಖೆಯಿಂದ ಸತ್ಯ ಹೊರಲಿದೆ.

ಅಲ್ಲಿಯವರೆಗೆ ವಿಪಕ್ಷಗಳು ಕಾಯಬೇಕು. ಎರಡು ದಿನಗಳ ಹಿಂದೆಯೇ ಈಶ್ವರಪ್ಪನವರು ರಾಜೀನಾಮೆಗೆ ಮುಂದಾಗಿದ್ದರು. ಪಕ್ಷಕ್ಕೆ ಮುಜುಗರವಾಗಬಾರದೆಂದು ಈಗ ಅವರೇ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು