News Karnataka Kannada
Monday, April 29 2024
ಗದಗ

ಕಾಂಗ್ರೆಸ್ ಮುಖಂಡರಿಗೆ ಬಿಟ್‌ಕಾಯಿನ್ ತಿರುಗುಬಾಣವಾಗಿ ಮುಳುವಾಗಲಿದೆ : ಸಚಿವ ಸಿ.ಸಿ. ಪಾಟೀಲ

Cc Patil
Photo Credit :

ಗದಗ: ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಜನಪರವಾದ ಆಡಳಿತವನ್ನು ನೀಡುತ್ತಾ ಈಗಾಗಲೇ ಯಶಸ್ವಿಯಾಗಿ ಶತದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ ಕಾಂಗ್ರೆಸ್ ನಾಯಕರು ಬಿಟ್-ಕಾಯಿನ್ ಹೆಸರಿನಲ್ಲಿ ವಿನಾಕಾರಣ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸಲು ಹವಣಿಸುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ .ಪಾಟೀಲ ಅವರು ತಿರುಗೇಟು ನೀಡಿದ್ದಾರೆ.

ಬಿಟ್‌ಕಾಯಿನ್ ವಿಚಾರದಲ್ಲಿ ವಿವಾದ ಸೃಷ್ಟಿಸಿ ಅದರಿಂದ ರಾಜಕೀಯ ದುರ್ಲಾಭ ಪಡೆದುಕೊಳ್ಳಬಹುದು ಎಂಬ ಹಗಲುಗನಸುಕಾಣುತ್ತಿರುವ ಕಾಂಗ್ರೆಸ್ ಮುಖಂಡರಿಗೆ, ಇದೇ ಬಿಟ್‌ಕಾಯಿನ್ ತಿರುಗುಬಾಣವಾಗಿ ಮುಳುವಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸಾಬೀತಾಗುತ್ತದೆ.

ಬಿಜೆಪಿ ನಾಯಕರೇ ತಮಗೆ ಬಿಟ್‌ಕಾಯಿನ್ ಹಗರಣದ ಮಾಹಿತಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ಸಿನ ಮುಖಂಡರೊಬ್ಬರು ಹೇಳುವ ಮೂಲಕ ಈ ತನಿಖೆಯ ಹಾದಿ ತಪ್ಪಿಸಲು ಮತ್ತು ಬಿಜೆಪಿಯಲ್ಲಿ ಹುಳಿ ಹಿಂಡಿ ಒಡಕು ಸೃಷ್ಟಿಸಲು ಹವಣಿಸಿರುವುದು ಸ್ಪಷ್ಟವಾಗಿದೆ. ಆದರೆ, ಇಂತಹ ಹುನ್ನಾರಗಳ ಆಟ ನಡೆಯುವುದಿಲ್ಲ. ಬಿಜೆಪಿಯಲ್ಲಿ ಆಂತರಿಕ ಒಕ್ಕಟ್ಟು ಗಟ್ಟಿಯಾಗಿದೆ. ಕಾಂಗ್ರೆಸ್ಸಿನ ಹಾಗೆ ಒಂದು ಮನೆ ಹಲವು ಬಾಗಿಲು ಎಂಬಂಥ ಪರಿಸ್ಥಿತಿ ನಮ್ಮಲ್ಲಿಲ್ಲ ಎಂದು ಸಿ.ಸಿ. ಪಾಟೀಲ ಅವರು ಹೇಳಿದರು.

ಬಿಟ್‌ಕಾಯಿನ್ ಹಗರಣ ಈಗಾಗಲೇ ಕೆಲವು ಕಾಂಗ್ರೆಸ್ ಮುಖಂಡರ ಕಾಲಿಗೆ ಸುತ್ತಿಕೊಂಡಿರುವುದು ಬಹಿರಂಗವಾಗಿದ್ದರೂ ಸಹ, ತಾವೇ ಸ್ವತಹ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವ ದುಸ್ಸಾಹಸಕ್ಕೆ ಕಾಂಗ್ರೆಸ್ ಮುಖಂಡರು ಇಳಿಯುತ್ತಿರುವ ವರ್ತನೆ ನಿಜಕ್ಕೂ ವಿಚಿತ್ರವಾಗಿದೆ.

ಬಿಟ್‌ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ಮಾಡಿದ್ದು ಮತ್ತು ಇ. ಡಿ. ಹಾಗೂ ಸಿಬಿಐಗೆ ಶಿಫಾರಸು ಮಾಡಿದ್ದೆ ನಮ್ಮ ಸರ್ಕಾರ, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿಯವರೇ ಸ್ಪಷ್ಟಪಡಿಸಿದ್ದಾರೆ.

ಅದರಂತೆ ಈಗ ತನಿಖೆ ಸರಿಯಾದ ದಿಕ್ಕಿನಲ್ಲಿಯೇ ನಡೆಯುತ್ತಿರುವುದರಿಂದ ಯಾರೂ ಸ್ವ ಕಪೋಲಕಲ್ಪಿತವಾಗಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಚಿವ ಸಿ.ಸಿ. ಪಾಟೀಲ ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು