Categories: ಗದಗ

ಗದಗ ಪೊಲೀಸ್​​ ಕಾನ್ಸ್​ಟೇಬಲ್​ ಆತ್ಮಹತ್ಯೆ ಪ್ರಕರಣ: 9 ಮಂದಿ ಮೇಲೆ ಎಫ್​ಐಆರ್

ಗದಗ : ಕಿರುಕುಳಕ್ಕೆ ಬೇಸತ್ತು ಪೊಲೀಸ್​​ ಕಾನ್ಸ್​ಟೇಬಲ್​ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ.

ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್​​ ಠಾಣೆಯ ಕಾನ್ಸ್​ಟೇಬಲ್ ಆಗಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಆರೇಳು ಪುಟಗಳ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ದುಷ್ಕರ್ಮಿಗಳ ಕಿರುಕುಳ ಹೆಚ್ಚಾಗಿದ್ದು, ಮಾನಸಿಕ ಹಿಂಸೆ ತಾಳದೇ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಎಂದಿನಂತೆ ಡ್ಯೂಟಿಗೆ ಹೋಗಬೇಕು ಎಂದು ಊಟದ ಬಾಕ್ಸ್​ ಕಟ್ಟಿಕೊಂಡಿದ್ದ. ಪತ್ನಿ ಹಾಗೂ ತಂದೆ ತಾಯಿ ಸೇರಿದಂತೆ ಕುಟುಂಬಸ್ಥರು ಧಾರವಾಡಕ್ಕೆ ಹೋಗಿದ್ದರು. ಈ ವೇಳೆ, ಮನೆಯಲ್ಲಿ ಯಾರೂ ಇರಲಿಲ್ಲ. ಅರ್ಜುನ್ ಪಾಟೀಲ್​ಗೆ ಯಾವುದೋ ಸಂದೇಶ ಬಂದಿದ್ದು, ಬಳಿಕ ಮನೆಯಲ್ಲೇ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಅರ್ಜುನ್ ಪಾಟೀಲ್​ಗೆ ಪತ್ನಿ, ಇಬ್ಬರು ಮಕ್ಕಳು, ತಂದೆ-ತಾಯಿ‌ ಇದ್ದರು. ಲಕ್ಕುಂಡಿ ಗ್ರಾಮದಲ್ಲಿ ಪಾರ್ಥಿವ ಶರೀರಕ್ಕೆ ಪೊಲೀಸ್​​ ಇಲಾಖೆಯಿಂದ ಗೌರವ ಸಲ್ಲಿಸಲಾಯಿತು. ಡಿವೈಎಸ್​​ಪಿ ಶಿವಾನಂದ, ಸಿಪಿಐ ಸೇರಿದಂತೆ ಹಲವರು ಈ ವೇಳೆ ಭಾಗಿಯಾಗಿದ್ದರು. ಮಗನ ಕಳೆದುಕೊಂಡ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆ ಸಂಬಂಧ ಗದಗ ಗ್ರಾಮೀಣ ಠಾಣೆಯಲ್ಲಿ ಕಿರುಕುಳ ನೀಡಿದ್ದ ಆರೋಪದ ಮೇಲೆ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿ 9 ಜನರ ಮೇಲೆ ಪ್ರಕರಣ ದಾಖಲಾಗಿದೆ.

Gayathri SG

Recent Posts

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

14 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

17 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

40 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago