ಗೋಕರ್ಣ : ಮುಂದಿನ ವರ್ಷದಿಂದ ರಾಜ್ಯದ 20 ಸಾವಿರ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಪೋಷಕರಲ್ಲಿ ಗೊಂದಲವಿದ್ದು,ಅದನ್ನು ನಿವಾರಿಸುವ ಕೆಲಸ ಮಾಡುತ್ತೇವೆ.
ಇನ್ನು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಹೀಗಾಗಿ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ.
ಇನ್ನು ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ತಜ್ಞರ ಜೊತೆಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.