News Karnataka Kannada
Tuesday, May 07 2024

ರಸ್ತೆ ಅಪಘಾತ, 3 ಜನ ಸಾವು

Death Body 08082021
Photo Credit :
ಗದಗ : ಗೂಡ್ಸ್ ಲಾರಿ  ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಈ ದುರ್ಘಟನೆ ಇಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಒಂದೇ ಬೈಕ್ ಪ್ರಯಾಣ ಬೆಳೆಸಿದ್ದ ಅಣ್ಣ-ತಂಗಿ ಹಾಗೂ ತಂಗಿ ಮಗು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪಿದವರು‌ ಶಿರಹಟ್ಟಿ ತಾಲೂಕಿನ ಕನಕವಾಡ ಗ್ರಾಮದವರೆಂದು ತಿಳಿದುಬಂದಿದೆ. ಮುಂಡರಗಿ ಪಟ್ಟಣದಿಂದ ಶಿರಹಟ್ಟಿ ಪಟ್ಟಣದತ್ತ ಅತೀ ವೇಗವಾಗಿ ಚಲಿಸುತ್ತಿದ್ದ ಲಾರಿ  ಬೈಕ್ ಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಬೈಕ್ ನಲ್ಲಿ ಮುಂಡರಗಿ ಪಟ್ಟಣದತ್ತ ತೆರಳುತ್ತಿದ್ದ ಅಣ್ಣ, ತಂಗಿ ಹಾಗೂ ತಂಗಿಯ ಮಗು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮುಂಡರಗಿ ಸಿಪಿಐ ಸುನೀಲ್ ಸವದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು