Categories: ಗದಗ

ವಜಾಗೊಳಿಸಿದ್ದ ಸಾರಿಗೆ ನೌಕರರನ್ನು ನಾಲ್ಕು ವಾರಗಳಲ್ಲಿ ಮರುನೇಮಕ: ಸಚಿವ ಬಿ.ಶ್ರೀರಾಮುಲು

ಗದಗ : ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಕೋವಿಡ್ ಸೋಂಕಿನ ತೀವ್ರತೆಗೂ ಮುನ್ನಾ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಕೆಲಸಕ್ಕೆ ಗೈರುಹಾಜರಿಯ ನೆಪ ನೀಡಿ ಸಾವಿರಾರೂ ಮುಷ್ಕರ ನಿರತರ ನೌಕರರನ್ನು ನಾಲ್ಕು ನಿಗಮದಿಂದ ಕೆಲಸದಿಂದ ವಜಾಗೊಳಿಸಲಾಗಿತ್ತು.

ಇದೀಗ ನಾಲ್ಕು ವಾರಗಳಲ್ಲಿ ವಜಾಗೊಳಿಸಲಾಗಿರುವಂತ ನೌಕರರನ್ನು ಮರುನೇಮಕ ಮಾಡಿಕೊಳ್ಳುವಂತೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ್ದಾರೆ.

ಈ ಸಂಬಂಧ ಇಂದು ನಗರದಲ್ಲಿ ಮಾತನಾಡಿದಂತ ಅವರು, ಮುಷ್ಕರದ ಸಂದರ್ಭದಲ್ಲಿ ವಜಾಗೊಳಿಸಲಾಗಿದ್ದಂತ ಸಾರಿಗೆ ನೌಕರರನ್ನು ಮರು ನೇಮಕದ ಬಗ್ಗೆ ಸೂಚಿಸಲಾಗಿದೆ. ನಾಲ್ಕು ನಿಗಮದ ಎಂಡಿಗಳಿಗೆ ಈಗಾಗಲೇ ಮರು ನೇಮಕಾತಿಗಾಗಿ ತಿಳಿಸಲಾಗಿದೆ. ನಾಲ್ಕು ವಾರದೊಳಗೆ ವಜಾಗೊಳಿಸಲಾಗಿದ್ದಂತ ನೌಕರರನ್ನು ಮರು ನೇಮಕ ಮಾಡಿಕೊಳ್ಳುವಂತೆ ಖಡಕ್ ಸೂಚನೆಯನ್ನು ಮತ್ತೆ ನೀಡಿರೋದಾಗಿ ತಿಳಿಸಿದರು.

ಅಂದಹಾಗೇ ಸಾರಿಗೆ ನೌಕರರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಲ ತಿಂಗಳ ಹಿಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅನೇಕ ನೌಕರರು ಕೆಲಸಕ್ಕೆ ಗೈರು ಹಾಜರಾಗಿ ಮುಷ್ಕರದಲ್ಲಿ ನಿರತರಾಗಿದ್ದರು. ಮುಷ್ಕರ ನಿರತರನ್ನು ಕೆಲಸಕ್ಕೆ ಮರಳಿಸೋ ಸಂಬಂಧ ಎಚ್ಚರಿಕೆ ನೋಟಿಸ್ ಕೂಡ ನೀಡಲಾಗಿತ್ತು. ಇದಕ್ಕೂ ಜಗ್ಗದೇ ನೌಕರರು ತಮ್ಮ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ನಿರತ ನೌಕರರನ್ನು ಕೆಲಸಕ್ಕೆ ಗೈರು ನೆಪವೊಡ್ಡಿ ಕೆಲಸದಿಂದ ವಜಾಗೊಳಿಸಲಾಗಿತ್ತು. ಈಗ ಸಾರಿಗೆ ಸಚಿವರು ನಾಲ್ಕು ವಾರದೊಳಗೆ ಈ ನೌಕರರನ್ನು ಮರುನೇಮಕ ಮಾಡಿಕೊಳ್ಳುವಂತೆ ಸೂಚಿಸಿ, ವಜಾಗೊಂಡಿದ್ದಂತ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

Gayathri SG

Recent Posts

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

2 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

20 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

21 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

25 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

36 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

41 mins ago