News Karnataka Kannada
Wednesday, May 01 2024
ಗದಗ

ಹೆತ್ತ ಮಗುವನ್ನೇ ಹತ್ಯೆಗೈದು ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣು

Suicide Hyderabad
Photo Credit :

ಗದಗ : ಮೂರು ತಿಂಗಳ ಹೆತ್ತ ಮಗುವನ್ನೇ ಹತ್ಯೆಗೈದು ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಗಡಾದ(30) ಸುಧಾ (24) ಹಾಗೂ ಮೂರು ತಿಂಗಳ ಮಗು ರೂಪಾಶ್ರೀ ಮೃತ ದುರ್ದೈವಿಗಳು.
ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಮಲ್ಲಪ್ಪ ಮೃತದೇಹ ಮನೆಯ ಹಾಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಪತ್ನಿ ಸುಧಾ ಹಾಗೂ ಮಗುವಿನ ಮೃತದೇಹ ಬೆಡ್ ರೂಮ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಗು ರೂಪಾಶ್ರೀಯನ್ನು ಕೊಂದು ಬಳಿಕ ಪತಿ-ಪತ್ನಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಗಜೇಂದ್ರಗಡ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು