News Karnataka Kannada
Sunday, April 28 2024
ಗದಗ

ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದ 38 ವಿದ್ಯಾರ್ಥಿಗಳ ಅಮಾನತು

ಜಿಮ್ಸ್ ಆಸ್ಪತ್ರೆಯಲ್ಲಿ  ರೀಲ್ಸ್  ಮಾಡಿ ಹುಚ್ಚಾಟ ಮೆರೆದಿದ್ದ 38 ಜನ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
Photo Credit : News Kannada

ಗದಗ:  ಜಿಮ್ಸ್ ಆಸ್ಪತ್ರೆಯಲ್ಲಿ  ರೀಲ್ಸ್  ಮಾಡಿ ಹುಚ್ಚಾಟ ಮೆರೆದಿದ್ದ 38 ಜನ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

ರೀಲ್ಸ್ ಮಾಡಿರುವ ಎಲ್ಲರೂ ಎಂಬಿಬಿಎಸ್ ಇಂಟರ್ನ್‍ಶಿಪ್ ವಿದ್ಯಾರ್ಥಿಗಳು.

ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಯ ಜನರಲ್ ವಾರ್ಡ್, ಕಾರಿಡಾರ್, ಮಕ್ಕಳ ವಾರ್ಡ್, ತರಗತಿ ಕೊಠಡಿ ಸೇರಿದಂತೆ ಆಸ್ಪತ್ರೆಯ ಎಲ್ಲಾ ಭಾಗಗಳಲ್ಲಿ ರೀಲ್ಸ್ ಮಾಡುತ್ತಿದ್ದರು. ಬಳಿಕ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದರು. ಇದರಿಂದ ರೋಗಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿತ್ತು.

ಅಲ್ಲದೇ ಚಿಕಿತ್ಸೆಗೆ ತೆರಳಿದ್ದ ರೋಗಿಗಳಿಗೆ ಕಿರಿಕಿರಿ ಉಂಟಾಗುತ್ತಿತ್ತು. ರೀಲ್ಸ್ ಮಾಡುವ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರು.

ಈ ಬಗ್ಗೆ ಜೀಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ಮಾಹಿತಿ ನೀಡಿದ್ದು, ಜಿಮ್ಸ್‍ನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಡಿಸ್ಟ್ರಿಕ್ಟ್ ಸರ್ಜನ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳನ್ನು ಅಮಾನತು ಮಾಡುವ ನಿರ್ಧಾರ ತೆಗೆದುಕೊಂಡಿದ್ದೆವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಅವರನ್ನು 10 ದಿನಗಳ ಕಾಲ ಅಮಾನತು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಈ ರೀತಿ ಮಾಡಿರುವುದು ದೊಡ್ಡ ಅಪರಾಧ. ಈ ರೀತಿ ವೀಡಿಯೋ ಮಾಡಲು ನಾವ್ಯಾರು ಅನುಮತಿ ಕೊಟ್ಟಿಲ್ಲ. ರೋಗಿಗಳಿಗೆ ಅನಾನುಕೂಲ ಆಗುವ ರೀತಿ ನಡೆದು ಕೊಂಡಿರುವುದು ತಪ್ಪು. ಯಾರೇ ಇರಲಿ, ಆಸ್ಪತ್ರೆಯಲ್ಲಿ ಈ ರೀತಿ ಮಾಡಿದರೆ ಅಂತವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು