News Karnataka Kannada
Sunday, April 28 2024
ಗದಗ

ಕ್ಯಾಂಟರ್ ವಾಹನ ಪಲ್ಟಿಯಾಗಿ: ಮೂವರು ಸಾವು

ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ನಡೆದಿದೆ. 
Photo Credit : News Kannada

ಗದಗ: ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ನಡೆದಿದೆ.

ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ನವೀನ್ ಕುಂಬಾರ್(23), ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ(22) ಎಂದು ಗುರುತಿಸಲಾಗಿದೆ.

ಕುಂದಗೋಳದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿಗೆ ಹೋಗುತ್ತಿದ್ದಾಗ ಈ ದುರ್ಘಟನ ನಡೆದಿದ್ದು, ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ.

ಮೃತರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದವರು ಎಂದು ತಿಳಿದುಬಂದಿದೆ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು