ಗದಗ: ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ 65-ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸುಜಾತಾ ದೊಡ್ಡಮನಿಯವರು ಪರಸಪೂರ ಗ್ರಾಮದಲ್ಲಿ ಗ್ರಾಮದ ಹಿರಿಯರ, ಪಕ್ಷದ ಪದಾಧಿಕಾರಿಗಳ, ಕಾರ್ಯಕರ್ತರ ಸಮ್ಮುಖದಲ್ಲಿ ಸಭೆ ನಡೆಸಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಕೈ ಗುರುತಿಗೆ ಮತ ಚಲಾಯಿಸುವಂತೆ ಪರಸಪೂರ ಗ್ರಾಮದ ಹಿರಿಯರಲ್ಲಿ ಕಾರ್ಯಕರ್ತರಲ್ಲಿ ವಿನಂತಿಸಿಕೊಂಡರು.
ಈ ವೇಳೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಪರಸಪೂರ ಗ್ರಾಮದ ಗಣ್ಯಮಾನ್ಯರು ಹಿರಿಯ ಮುಖಂಡರುಗಳು ಪಕ್ಷದ ಪ್ರಮುಖರು ಕಾರ್ಯಕರ್ತರು ಈ ಸಭೆಯಲ್ಲಿ ಉಪಸ್ಥಿತರಿದ್ದರು.