News Karnataka Kannada
Saturday, April 27 2024
ಗದಗ

ಗದಗ: ಯುವ ಶಿಲ್ಪಿಗೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಹ್ವಾನ

ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಗದಗ ಜಿಲ್ಲೆಯ ಮುಂಡರಗಿ ಶಿಲ್ಪಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಹ್ವಾನ ನೀಡಿದೆ.
Photo Credit : News Kannada

ಗದಗ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಗದಗ ಜಿಲ್ಲೆಯ ಮುಂಡರಗಿ ಶಿಲ್ಪಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಹ್ವಾನ ನೀಡಿದೆ.

ನಾಗಮೂರ್ತಿ ಯುವ ಶಿಲ್ಪಿ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಶಿಲ್ಪಕಲೆ ಶಾಪ್ ನಡೆಸುತ್ತಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆ ಕಾತರಕಿ ಗ್ರಾಮದ ನಿವಾಸಿಯಾಗಿದ್ದಾನೆ. ಮೈಸೂರಿನ ಜಿಲ್ಲೆ ಎಚ್.ಡಿ ಕೋಟೆಯಲ್ಲಿ ದೊರೆಯುವ ಕರಿಕಲ್ಲುಗಳನ್ನ (ಕೃಷ್ಣ ಶಿಲೆ) ಬಳಸಿ ಮೂರ್ತಿ ತಯಾರಿ ಮಾಡುವಲ್ಲಿ ಪರಿಣತಿ ಪಡೆದಿದ್ದಾನೆ. ಹಲವು ದೇವಾಲಯಗಳ ಮೂರ್ತಿಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.

ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಲಿರುವ ನಾಗಮೂರ್ತಿಗೆ ಸ್ಥಳೀಯರು ಸನ್ಮಾನ ಮಾಡಿ ಗೌರವಿಸಿದ್ದಾರೆ. ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಳ್ಳುತ್ತೇನೆ. ಈ ಸೌಭಾಗ್ಯ ಒದಗಿಬಂದಿದ್ದಕ್ಕೆ ತುಂಬಾ ಖುಷಿಯಾಗಿದೆ. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನನಗೆ ಆಹ್ವಾನ ಬಂದಿದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ಶಿಲ್ಪಿ ನಾಗಮೂರ್ತಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು