Categories: ಗದಗ

ರವಿ ಡಿ ಚನ್ನಣ್ಣನವರ್‌ ಹೆಸರಲ್ಲಿ ಆನ್‌ಲೈನ್‌ ವಂಚನೆ

ಗದಗ: ಗದಗದಲ್ಲಿ ಪೊಲೀಸ್‌ ಅಧಿಕಾರಿಗಳ ಹೆಸರನ್ನೇ ದುರ್ಬಳಕೆ ಮಾಡಿಕೊಂಡು ಆನ್‌ಲೈನ್‌ ವಂಚನೆ ಮಾಡಲಾಗಿದೆ. ಅದರಲ್ಲೂ, ಐಪಿಎಸ್‌ ಅಧಿಕಾರಿ ರವಿ ಡಿ. ಚನ್ನಣ್ಣನವರ್‌ ಅವರ ಹೆಸರು ಬಳಸಿ ವ್ಯಕ್ತಿಯೊಬ್ಬರಿಗೆ 55 ಸಾವಿರ ರೂ. ವಂಚನೆ ಮಾಡಲಾಗಿದೆ.

ಗದಗ ಜಿಲ್ಲೆಯ ರಮೇಶ್‌ ಹತ್ತಿಕಾಳ ಅವರಿಗೆ 55 ಸಾವಿರ ರೂ. ವಂಚನೆ ಮಾಡಲಾಗಿದೆ. ರವಿ ಡಿ. ಚನ್ನಣ್ಣನವರ್‌ ಹಾಗೂ ಸಿಆರ್‌ಪಿಎಫ್‌ ಯೋಧನ ಹೆಸರು ಹೇಳಿಕೊಂಡು ಇವರಿಗೆ ಆನ್‌ಲೈನ್‌ ಮೂಲಕ ವಂಚನೆ ಮಾಡಲಾಗಿದೆ. ಫೇಸ್‌ಬುಕ್‌ನಲ್ಲಿ ರವಿ ಡಿ. ಚನ್ನಣ್ಣನವರ್‌ ಹಾಗೂ ಸಿಆರ್‌ಪಿಎಫ್‌ ಯೋಧ ಸಂತೋಷ್‌ ಕುಮಾರ್‌ ಎಂಬ ಹೆಸರಿನಲ್ಲಿ ನಕಲಿ ಖಾತೆ ಕ್ರಿಯೇಟ್‌ ಮಾಡಿ, ನಂಬಿಸಿ, 55 ಸಾವಿರ ರೂ. ವಂಚಿಸಲಾಗಿದೆ. ವಾಟ್ಸ್‌ಆ್ಯಪ್‌ನಲ್ಲೂ ರಮೇಶ್‌ ಅವರ ಜತೆ ದುಷ್ಕರ್ಮಿಗಳು ಚಾಟ್‌ ಮಾಡಿದ್ದಾರೆ. ಐಪಿಎಸ್‌ ಅಧಿಕಾರಿ ಹಾಗೂ ಯೋಧ ಎಂಬುದಾಗಿ ಮೆಸೇಜ್‌ನಲ್ಲಿ ನಂಬಿಸಿದ್ದಾರೆ. ಕೊನೆಗೂ ಮೋಸದ ಅರಿವಾಗಿ ರಮೇಶ್‌ ಅವರು ಗದಗ ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ramya Bolantoor

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago