News Karnataka Kannada
Monday, May 06 2024
ಗದಗ

ಕೊನೆಗೂ ಗದಗ ಕೊಲೆ ಪ್ರಕರಣದ ರಹಸ್ಯ ಭೇದಿಸಿದ ಖಾಕಿ; ಮಗನೇ ಇದರ ರೂವಾರಿ !

New Project
Photo Credit : NewsKarnataka

ಗದಗ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಹತ್ಯೆಯ ರಹಸ್ಯ ಭೇದಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಘಟನೆ ಸಂಬಂಧ 8 ಮಂದಿ ಆರೋಪಿಗಳನ್ನು 48 ಗಂಟೆಗಳ ಒಳಗಾಗಿ ಬಂಧಿಸಿದ್ದೇವೆ ಎಂದು ಗದಗ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್ ತಿಳಿಸಿದ್ದಾರೆ.

ಗದಗ ಎಸ್​​ಪಿ ಬಿಎಸ್ ನೇಮಗೌಡ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಘಟನೆ ಸಂಬಂಧ ಪ್ರಮುಖ ಆರೋಪಿ ವಿನಾಯಕ್ ಬಾಕಳೆ ಸೇರಿದಂತೆ, ಇತರ ಆರೋಪಿಗಳಾದ ಫೈರೋಜ್ ಖಾಜಿ, ಜಿಶಾನ್ ಖಾಜಿ, ಮೀರಜ್​ ಮೂಲದ ಸಾಹಿಲ್, ಸೋಹೆಲ್ ಖಾಜಿ, ಸುಲ್ತಾನ್ ಶೇಖ್, ಮಹೇಶ್ ಸಾಳೋಂಕೆ, ವಾಹಿದ್ ಬೇಪಾರಿಯನ್ನು ಬಂಧಿಸಲಾಗಿದೆ.

ಪ್ರಕರಣದ ಮೊದಲ ಆರೋಪಿ ವಿನಾಯಕ್ ಬಾಕಳೆ (ಪ್ರಕಾಶ್ ಬಾಕಳೆಯ ಮೊದಲ ಪತ್ನಿಯ ಮಗ) ಮತ್ತೊಬ್ಬ ಆರೋಪಿ ಫೈರೋಜ್​ಗೆ 65 ಲಕ್ಷ ರೂಪಾಯಿ ಹಣಕ್ಕೆ ಸುಪಾರಿ ಡೀಲ್​ ಕೊಟ್ಟಿದ್ದ. ಮುಂಗಡವಾಗಿ 2 ಲಕ್ಷ ರೂಪಾಯಿ ಕೊಟ್ಟಿದ್ದ ವಿನಾಯಕ್ ಬಾಕಳೆ ತಂದೆ ಪ್ರಕಾಶ್ ಬಾಕಳೆ, ಅವರ ಪತ್ನಿ ಸುನಂದಾ ಹಾಗೂ ಪುತ್ರ ಕಾರ್ತಿಕ್ ಕೊಲೆಗೆ ಸಂಚು ಹೂಡಿದ್ದ. ತಂದೆ ಪ್ರಕಾಶ್ ಜೊತೆ ವ್ಯವಹಾರಿಕ ವೈಮನಸ್ಸಿನ ಕಾರಣ ಈ ಕೊಲೆಗೆ ಆತ ಸಂಚು ಹೂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಘಟನೆ ದಿನ ಪ್ರಕಾಶ್ ಹಾಗೂ ಅವರ ಪತ್ನಿ ಸುನಂದಾ ಬೇರೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಅವರು ಸಾವಿನಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ. ಮನೆಗೆ ನುಗ್ಗಿದ್ದ ಹಂತಕರು ಅವರ ಬದಲಿಗೆ ಕಾರ್ತಿಕ್ ಜೊತೆ ಇದ್ದ ಸಂಬಂಧಿಕರನ್ನು ಹತ್ಯೆ ಮಾಡಿದ್ದಾರೆ. ಪ್ರಕಾಶ್ ಹಾಗೂ ಸುನಂದಾ ಎಂದು ಭಾವಿಸಿ ಹಂತಕರು ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಜತೆಗಿದ್ದ ಕೊಪ್ಪಳದ ಭಾಗ್ಯ ನಗರ ನಿವಾಸಿ, ಹೋಟೆಲ್ ಉದ್ಯಮಿ ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಇವರನ್ನು ಹತ್ಯೆ ಮಾಡಿದ್ದರು. ಈ ವಿಚಾರವನ್ನು ತನಿಖೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

Read More:

 

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ !

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು